ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಕನಕಪುರ : ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕನಕಪುರ : ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಮೈಸೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡು ನ್ಯಾಯಯುತವಾಗಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಆತ್ಮಹತ್ಯೆ ಪ್ರೇರಣೆ ಸರ್ಕಾರವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆಯು ಮಾನವ-ಆನೆ ಸಂಘರ್ಷ ನಿರ್ವಹಣೆಯ ಕುರಿತ ಅಂತರಾಷ್ಟ್ರೀಯ ಸಮ್ಮೇಳನವನ್ನು ಆ.12ರಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಆಯೋಜಿಸಲಾಗಿದೆ.
ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು : ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು : ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ನನಗೆ ಅವರ ವಿಚಾರ ಗೊತ್ತಿರಲಿಲ್ಲ. ಅವರ ವಿರುದ್ಧ ಸುಮಾರು 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವನ್ನು ಹೊರಗೆ ತರುತ್ತೇನೆ. ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಚಾರಣೆ ನಡೆಸಲು ಲೋಕಾಯುಕ್ತದವರು ರಾಜ್ಯಪಾಲರಿಗೂ ಪತ್ರ ಬರೆದಿದ್ದಾರಂತೆ. ಆದರೆ ಕುಮಾರಸ್ವಾಮಿ ಯೂಟರ್ನ್ ಮಾಡಿಕೊಂಡು ಈಗ ಬಿಜೆಪಿ ಮೊರೆ ಹೋಗಿದ್ದಾರೆ.
ಮಂಡ್ಯ : “ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬಳ್ಳಾರಿ : ಮಕ್ಕಳು ಶಾಲೆಯಲ್ಲಿ ಶಿಕ್ಷಣ ಪಡೆಯುವುದಲ್ಲದೇ ಆರೋಗ್ಯ ಕಾರ್ಯಕ್ರಮಗಳ ಶಿಕ್ಷಣದ ಅರಿವು ಹೊಂದಬೇಕು. ಈ ಮೂಲಕ ವಿದ್ಯಾರ್ಥಿಗಳು ಎಲ್ಲಾ ವಿಷಯವನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಬೆಳಗಾವಿ : ಕೃಷ್ಣಾ ನದಿಯಲ್ಲಿ ಪ್ರವಾಹದಿಂದಾಗಿ ಪ್ರತಿ ಬಾರಿ ನೆರೆ ಹಾವಳಿಗೆ ತುತ್ತಾಗುವ ಗ್ರಾಮಗಳ ಜನರನ್ನು ಶಾಶ್ವತವಾಗಿ ಬೇರೆ ಕಡೆಗೆ ಸ್ಥಳಾಂತರಿಸುವ ಬೇಡಿಕೆ ಕುರಿತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಕಾಗವಾಡ ತಾಲೂಕಿನ ಜೂಗಳ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
ತುಮಕೂರು: ೨೦೨೪ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು ೨೭೦೦೦ ರೈತರಿಂದ ಒಟ್ಟು ೩,೧೫,೦೦೦ ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು.
ಈ ಸಂಬಂಧ ಒಟ್ಟು ಬಾಬ್ತು ರೂ.೩೭೮ ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಸುಮಾರು ೨೪೬೦೦ ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆಯೆಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.