ಇಂದು IPL ಫೈನಲ್ || ಮೀಸಲು ದಿನ ಕೂಡ ಮಳೆ ಬಂದರೆ ಯಾರಾಗಲಿದ್ದಾರೆ ಚಾಂಪಿಯನ್..?
ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಇಂದು ಸೋವವಾರಕ್ಕೆ ಮುಂದೂಡಲಾಗಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಇದರಿಂದಾಗಿ ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು.