ಬಳ್ಳಾರಿ ಜಿಲ್ಲೆಯಲ್ಲಿ 6 ವರ್ಷಗಳಲ್ಲಿ 2388 ಜನರಿಗೆ ಹೆಚ್‍ಐವಿ ಸೋಂಕು ದೃಢ
ಬಳ್ಳಾರಿ : ಜಿಲ್ಲೆಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ತಿಳಿಸಿದರು.