ವೀಡಿಯೊಗಳು

ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ?

ಬೆಂಗಳೂರು: ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಸೇವಾ ಸಿಂಧು ಪೋರ್ಟಲ್ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು. ಸದ್ಯ ಎಲ್ಲವೂ ಸರಿಯಾಗಿದ್ದು, ಹಾಗಾಗಿ ಈಗ ಅರ್ಜಿ ಸಲ್ಲಿಸಬಹುದಾಗಿದೆ .

ಕೋಲಾರದಲ್ಲಿ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ

ಬಳ್ಳಾರಿ: ಇತ್ತೀಚೆಗಷ್ಟೇ ಕೋಲಾರ ಜಿಲ್ಲೆಯ ಕೆಂದಟ್ಟಿ ಗ್ರಾಮದ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಬಳ್ಳಾರಿ ಮೂಲಕ ವೈದ್ಯಕೀಯ ವಿದ್ಯಾರ್ಥಿನಿ ದರ್ಶಿನಿ ಸಾವಿಗೆ ಎಂವಿಜೆ ಕಾಲೇಜಿನ ಪ್ರಾದ್ಯಾಪಕರೇ ಕಾರಣರಾಗಿದ್ದು, ಆ ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಜಿಲ್ಲಾ ಗೊಲ್ಲರ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು.

10000 ವರ್ಷದ ಹಳೆಯ ತ್ರಿಶೂಲ, 3000 ವರ್ಷದ ವಜ್ರಾಯುಧ ಭಾರತೀಯರ ಮುಂದೆ ಅನಾವರಣ

ಬೆಂಗಳೂರು: ಸಾವಿರ ವರ್ಷಗಳ ಹಳೆಯದಾದ ಶಿವನ ತ್ರಿಶೂಲ ಮತ್ತು 3 ಸಾವಿರ ವರ್ಷಗಳ ಪುರಾತನ ಇಂಧ್ರನ ವಜ್ರಾ [ವಜ್ರಾಯುಧ] ಪತ್ತೆಯಾಗಿದೆ. ಫಿಲಿಫೈನ್ಸ್ ದೇಶದಲ್ಲಿ 2015 ರಲ್ಲಿ ಗಣಿಗಾರಿಕೆ ಮಾಡುವಾಗ ಭೂ ಗರ್ಭದಲ್ಲಿ ಐತಿಹಾಸಿಕ, ಸಾಂಸ್ಕತಿಕ ಮತ್ತು ಕಲಾತ್ಮಕ ಮೌಲ್ಯವುಳ್ಳ ಅತ್ಯಂತ ಅಪರೂಪದ, ಅಮೂಲ್ಯ ಮತ್ತು ಭಾರತೀಯ ಪರಂಪರೆಯ ಈ ವಸ್ತುಗಳು ಗಣಿ ಉದ್ಯಮಿ, ಸಂಶೋಧಕ ಸಯ್ಯದ್ ಸಮೀರ್ ಹುಸೇನ್ ಅವರಿಗೆ ದೊರೆತಿದ್ದು, ಇವು ದೈವಿಕ ಸ್ವರೂಪದ ಮೌಲ್ಯಗಳನ್ನು ಒಳಗೊಂಡಿವೆ.

‘ಕಮಸಂ’ ಇಲಾಖೆಯಲ್ಲಿ ಅಕ್ರಮಗಳ ತನಿಖೆಗೆ ಆಗ್ರಹ

ಬಳ್ಳಾರಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಕಛೇರಿಗಳಲ್ಲಿ ನಡೆದಿರುವ ಅವ್ಯವಹಾರ-ಅಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಸಚಿವರು ಸಮಗ್ರ ತನಿಖೆ ನಡೆಸುವಂತೆ ಬಳ್ಳಾರಿ ಜಿಲ್ಲಾ ಕಲಾವಿದರ ವೇದಿಕೆಯು ಆಗ್ರಹಪಡಿಸಿದೆ.

ಗ್ಯಾರೆಂಟಿ ಜಾರಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್-ಉಗ್ರಪ್ಪ

ಬಳ್ಳಾರಿ : ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವ ನೀಡಿದ ಭರವಸೆಯಂತೆ, ಅಧಿಕಾರಕ್ಕೆ ಬಂದ ಕೂಡಲೇ ಮೊಟ್ಟಮೊದಲ ಸಚಿವ ಸಂಪುಟ ಸಭೆಯಲ್ಲಿಯೇ 5 ಗ್ಯಾರೆಂಟಿಗಳ ಈಡೇರಿಕೆಗೆ ಒಪ್ಪಿಗೆ ನೀಡಿ, ಅದರಂತೆಯೇ ಅವುಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿದ್ದು, ನುಡಿದಂತೆಯೇ ನಡೆದು ತೋರಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ನೂತನ ಮೇಯರ್, ಉಪ ಮೇಯರ್ ಅಧಿಕಾರ ಸ್ವೀಕಾರ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾಗಿರುವ ಡಿ.ತ್ರಿವೇಣಿ ಹಾಗೂ ಉಪ-ಮಹಾಪೌರರಾದ ಬಿ.ಜಾನಕಿ ಅವರು ಇಂದು ವಿದ್ಯುಕ್ತವಾಗಿ ಪದಗ್ರಹಣ ಮಾಡಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬಳ್ಳಾರಿಯ ಪ್ರಗತಿಗೆ ಶಕ್ತಿ ಮೀರಿ ಶ್ರಮಿಸುತ್ತೇವೆ ಎಂದ ಸಚಿವ ನಾಗೇಂದ್ರ

ಬಳ್ಳಾರಿ : ಬಳ್ಳಾರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸುತ್ತೇವೆ ಬಳ್ಳಾರಿ ಮೇಯರ್ ತ್ರಿವೇಣಿಯವರು ದೇಶದಲ್ಲಿಯೇ ಅತ್ಯಂತ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂತೆಯೇ ಬಳ್ಳಾರಿ ನಗರ ಶಾಸಕ ಭರತ್‌ರೆಡ್ಡಿಯವರು ಕೂಡಾ ಯುವಕರಾಗಿದ್ದು, ನಾನು ಮತ್ತು ಸಂಸದ ಡಾ||ಸೈಯದ್ ನಾಸಿರ್ ಹುಸೇನ್ ಎಲ್ಲರೂ ಸೇರಿ ಬಳ್ಳಾರಿಯ ಪ್ರಗತಿಗೆ ಶಕ್ತಿಮೀರಿ ಶ್ರಮಿಸುವುದಾಗಿ ರಾಜ್ಯದ ಯುವಜನ ಸಬಲೀಕರಣ, ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು: ಸಚಿವ ಬಿ.ನಾಗೇಂದ್ರ

ಬಳ್ಳಾರಿ : ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಬಳ್ಳಾರಿ ಅರಣ್ಯ ವಿಭಾಗ ಮತ್ತು ಮುನಿಸಿಪಲ್ ಕಾಲೇಜು ಸಹಯೋಗದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದಲ್ಲಿ ಯುವ ಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರು ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿದರು.

ಕುಸಿದು ಬಿದ್ದ ₹1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ!

ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ.

Translate »
Scroll to Top