ಡಾ.ವರ ಪ್ರಸಾದ್ ರಾವ್ ಪಿ ವಿ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಬಸವನಗುಡಿಯ ಇತಿಹಾಸ ಪ್ರಸಿದ್ಧಿ ದೊಡ್ಡಗಣೇಶ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆಗೆ ಜಾತ್ರೆ ಮಹೋತ್ಸವ ಕಾರ್ತಿಕ ಮಾಸದ ಕೊನೆಯ ಸೋಮವಾರ ಜರುಗಲಿದೆ. ಈ ಪ್ರಸಿದ್ಧ ಪರಿಷೆಗೆ ರಾಜ್ಯದ ನಾನ ಭಾಗಗಳಿಂದ ಲಕ್ಷಂತರ ಭಕ್ತರು ಪರಿಷೆಯಲ್ಲಿ ಭಾಗಿಯಾಗಿ ದೊಡ್ಡ ಗಣಪನ ದರ್ಶನ ಪಡೆಯುತ್ತಾರೆ. ಬೆಂಗಳೂರು ಗಾತ್ರದಲ್ಲಿ ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ನೆಲಗಡಲೆ (ಶೇಂಗಾ) ಬೆಳೆಯುತ್ತಿದ್ದರು. ಆದರೆ ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲ ಗದ್ದೆಗೆ ದಾಳಿ ಇಡುತ್ತಿದ್ದ ಬಸವವೊಂದು ನಾಶಪಡಿಸುತ್ತಿತ್ತು. ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಬಸವ (ನಂದಿ)ನನ್ನ ಪ್ರಾರ್ಥಿಸಲು ಆರಂಭಿಸಿದರು. ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು ಮತ್ತು ಈ ಸ್ಥಳದಲ್ಲಿ ಕೆಂಪೇಗೌಡರು ೧೬ ನೇಶತಮಾನದಲ್ಲಿ ನಂದಿಯ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ. ಕಡಲೆ ಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ ಮತ್ತು ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬ ನಂಬಿಕೆಯಿದೆ.
ಎಲ್ಲಿ ನೋಡಿದರೂ ಬಡವರ ಬಾದಾಮಿ ಬೆಂದಕಾಳೂರಿನ ಮೂಲ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಬಸವನಗುಡಿ ಕಡ್ಲೆಕಾಯಿ ಪರಿಷೆಗೆ ಹೋಗೋದಂದ್ರೆ ಯಾರಿಗೇ ಆದ್ರೂ ಎಲ್ಲಿಲ್ಲದ ಖುಷಿ. ಯಾಕಂದ್ರೆ ಈ ಸಂದರ್ಭದಲ್ಲಿ ಯಾವ ಕಡೆ ನೋಡಿದ್ರೂ ಬಡವರ ಬಾದಾಮಿಯೇ ಕಣ್ಣಿಗೆ ಬೀಳುತ್ತೆ. ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ, ಮಂಡ್ಯ, ಮೈಸೂರು, ತುಮಕೂರು, ಕುಣಿಗಲ್ ಹೀಗೆ ನಾನಾ ಭಾಗಗಳಿಂದ ನೆಲೆಗಡ್ಲೆಯನ್ನು ರೈತರು ತಂದು ಇಲ್ಲಿ ಮಾರ್ತಾರೆ. ನೆರೆಯ ರಾಜ್ಯ ಆಂಧ್ರಪ್ರದೇಶ, ಕೇರಳ, ತಮಿಳುನಾಡಿನಿಂದ ವ್ಯಾಪಾರಸ್ಥರು ಕಡೆಲೆಕಾಯಿ, ಕಡ್ಲೆಪುರಿ, ವಿವಿಧ ಬಗ್ಗೆಯ ಅಟೀಕೆ ವಸ್ತುಗಳನ್ನು ಇಲ್ಲಿ ವ್ಯಾಪಾರ ಮಾಡುತ್ತಾರೆ.
ದೇವಸ್ಥಾನದಲ್ಲಿ ಕಡಲೆಕಾಯಿ ಪರಿಷೆ ನಡೆಯುತ್ತೆ. ಪರಿಷೆಯಲ್ಲಿ ೫ ಸಾವಿರಕ್ಕೂ ಅಧಿಕ ತಾತ್ಕಲಿಕ ಅಂಗಡಿಗಳು ನಿರ್ಮಾಣ ಮಾಡಿ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತೆ. ಪಾಲಿಕೆ, ಜಾಗ ಸೇರಿದಂತೆ ರಸ್ತೆಗಳನ್ನೂ ಬಂದ್ ಮಾಡಿ, ದೇವಸ್ಥಾನದ ಸುತ್ತಮುತ್ತ ಸುಮಾರು ೨ ಕಿ.ಮೀಟರ್ ರಸ್ತೆಯಲ್ಲಿ ಅಂಗಡಿ ನಿರ್ಮಿಸಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುತ್ತೆ. ಈ ಜಾತ್ರೆಯಲ್ಲಿ ರಾಜ್ಯದ ನಾನ ಭಾಗಗಳಿಂದ ಲಕ್ಷಕ್ಕು ಅಧಿಕ ಮಂದಿ ಭಕ್ತರು ಭಾಗವಹಿಸುತ್ತಾರೆ. ಮೂರು ದಿನಗಳ ಈ ಪರಿಷೆಯಾಲ್ಲಿ ಸುಮಾರು ಐದು ಕೋಟಿಗೂ ಅಧಿಕ ವ್ಯಾಪಾರ ವಹಿವಾಟು ಪ್ರತಿವರ್ಷ ನಡೆಯುತ್ತದೆ. ಈ ಬಾರಿಯ ಪರಿಷೆಗೆ ಕಳೆದ ವರ್ಷಕ್ಕಿಂತ ಹೆಚ್ಚು ಜನರು ಬರುವ ನಿರೀಕ್ಷೆಯಿದೆ. ಕಳೆದ ವರ್ಷ ಕೋವಿಡ್ ಹಿನ್ನೆಲೆ ಪರಿಷೆಗೆ ಕೇವಲ ಒಂದು ದಿನ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಆದ್ರೆ ಈ ಬಾರಿ ಮೊದಲಿನಂತೆ ೩ ದಿನಗಳ ಕಾಲ ಜಾತ್ರೆ ನಡೆಯಲಿದೆ ಬಸವನಗುಡಿಯ ದೊಡ್ಡ ಗಣಪನಿಗೆ ಇಂದು ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳು ನಡೆದಿವೆ.
ಸುಮಾರು ೨ ಕ್ವಿಂಟಾಲ್ ಕಡಲೆಕಾಯಿ, ಪಂಚಾಮೃತಗಳಿಂದ ದೇವರಿಗೆ ಅಭಿಷೇಕ ನಡೆದಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಬಸವನಗುಡಿ ಸುತ್ತಮುತ್ತ ಜಾತ್ರೆಯ ವಾತಾವರಣವಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ದೊಡ್ಡ ಗಣೇಶ ಹಾಗೂ ದೊಡ್ಡ ಬಸವಣ್ಣನ ದೇವಸ್ಥಾನದಲ್ಲಿ ಭಕ್ತಾದಿಗಳು ಸರಥಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಯಮ ಜಾರಿ ಮಾಡಿದ್ದು, ದೇವಾಸ್ಥಾನಕ್ಕೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಜಾತ್ರೆ ನಡೆಯುವ ಸ್ಥಳದಲ್ಲಿಯೇ ಟೆಸ್ಟಿಂಗ್ ಸೆಂಟರ್ ಹಾಗೂ ವ್ಯಾಕ್ಸಿನ್ ನೀಡಲು ಸಜ್ಜು ಮಾಡಲಾಗಿದೆ. ಓಮಿಕ್ರಾನ್ ಆತಂಕದ ನಡುವೆಯೇ ಐಸಿಹಾಸಿಕ ಜಾತ್ರೆಗೆ ಅನುಮತಿ ನೀಡಿದ್ದು, ಜನರು ಸಂಭ್ರಮದಲ್ಲಿ ಮೈ ಮರೆಯದಂತೆ ಎಚ್ಚರಿಕೆ ವಹಿಸಬೇಕಿದೆ.