ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಸಮ್ಮತಿ: ಕನ್ನಡಿಗರ ಸುಧೀರ್ಘಹೋರಾಟ ಯಶಸ್ವಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನರ‍್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ರ‍್ಕಾರ ಸುಪ್ರೀಂಕರ‍್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ. ಹೀಗಾಗಿ ಕೇಂದ್ರ ರ‍್ಕಾರಕ್ಕೆ ನರ‍್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ರ‍್ಕಾರ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಈ ರ‍್ಜಿಯನ್ನು ಸುಪ್ರೀಂಕರ‍್ಟ್ನ ನ್ಯಾಯಮರ‍್ತಿ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಏಪ್ರಿಲ್ ೨೯ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ರ‍್ಕಾರದ ಪರ ಅಟರ‍್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ ೨೯ಕ್ಕೆ ಮುಂದೂಡಿತು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ಸಲ್ಲಿಸಿದ್ದಾರೆ.

 

೨೦೨೩ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ರ‍್ಕಾರ ನರ‍್ಧಾರ ಕೈಗೊಳ್ಳದ ಕಾರಣ ಬರ ಪರಿಹಾರ ಹಣಕ್ಕಾಗಿ ಕೇಂದ್ರ ರ‍್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು ಆಗಿದೆ. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುಧರ‍್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top