ರಾಜ್ಯ ಸಚಿವರಿಂದ ಕೇಂದ್ರ ಗೃಹ, ಕೃಷಿ ಇಲಾಖಾ ಕಾರ್ಯದರ್ಶಿಗಳ ಭೇಟಿ

ನವದೆಹಲಿ: ಇಂದು ನವದೆಹಲಿಯಲ್ಲಿ  ಕೇಂದ್ರ ಕೃಷಿ ಇಲಾಖೆ ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ ಶೀಘ್ರದಲ್ಲಿಯೇ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಿಲಾಯಿತು.

ರಾಜ್ಯದಲ್ಲಿ ಈ ಬಾರಿ ಬರಗಾಲದಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಜನತೆಯ ಒಳಿತಿಗಾಗಿ ಕೇಂದ್ರದ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ರಾಜ್ಯಕ್ಕೆ ನೆರವು ಒದಗಿಸುವಂತೆ ಕೋರಿದ್ದೇವೆ.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ  ಎನ್‍.ಚಲುವರಾಯಸ್ವಾಮಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಉಪಸ್ಥಿತರಿದ್ದರು.

Facebook
Twitter
LinkedIn
Telegram
Email
XING
WhatsApp
Print

Leave a Comment

Your email address will not be published. Required fields are marked *

Translate »
Scroll to Top