ಬೆಂಗಳೂರು: ಕಳೆದ ಒಂದು ವಾರದಿಂದಲೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜೂನ್ 30ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 44 ರಿಂದ 48 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗಗಳಲ್ಲಿ ವಾಸಿಸುವ ಮೀನುಗಾರರು, ಪ್ರವಾಸಿಗರು ಸ್ಥಳೀಯ ವೀಕ್ಷಕರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿಯೂ ಉತ್ತಮ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
Facebook
Twitter
LinkedIn
WhatsApp
Email
Telegram