ಬೆಳಗಾವಿಯ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಸಲೀಂ ಅಹಮದ್, ಚನ್ನರಾಜ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ರಮೇಶ್ ಕುಮಾರ್, ಎಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಸಿ.ಎಂ. ಇಬ್ರಾಹಿಂ, ಬಿ.ಕೆ. ಹರಿಪ್ರಸಾದ್ ಹಾಜರಿದ್ದರು.

