ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ ಆರರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಬಜೆಟ್ ಘೋಚಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು. ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಶಿವಾನಂದ ಪಾಟೀಲ, ಎಸ್. ಎಸ್. ಮಲ್ಲಿಕಾರ್ಜುನ್, ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.