ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕನ್ನಡ ಸಂಭ್ರಮ-50” ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು.
ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ “ಅರಿಶಿನ-ಕುಂಕಮ” ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು.
ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ ಕನ್ನಡ ರಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳು, ಕಾರ್ಯಕರ್ತರು ಹೂಮಳೆಗರೆದು ಸ್ವಾಗತಿಸಿದರು.
ಹಾದಿಯುದ್ದಕ್ಕೂ ಮನೆಗಳ ಮುಂದೆ ಕನ್ನಡದ ರಂಗೋಲಿ, ಬಾವುಟಗಳು ಕಣನ ಸೆಳೆಯುತ್ತಿದ್ದರೆ ಮಹಿಳೆಯರು, ಮಕ್ಕಳು ರಥಕ್ಕೆ ಹೂಮಳೆ ಗರೆಯುತ್ತಾ, ರಥದ ಚಕ್ರಗಳಿಗೆ ಹಣ್ಣು ಕಾಯಿ, ಹಾಲಿನ ಅಭಿಷೇಕ ನಡೆಸುತ್ತಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಂಕಳ ವೈದ್ಯ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.