ಜನಾಂಗದ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತುನೀಡಿ : ಜಯರಾಜ್

ದೇವನಹಳ್ಳಿ: ವಿದ್ಯಾಭ್ಯಾಸಕ್ಕೆ ಜಾತಿ ಬೇಧದ ಹಂಗಿಲ್ಲ. ವಿದ್ಯೆ ಯಾರ ಸ್ವತ್ತೂ ಅಲ್ಲ. ನಾವು ಪಡೆದ ಶಿಕ್ಷಣ ನಮ್ಮ‌ಮುಂದಿನ ಭವಿಷ್ಯಕ್ಕೆ ದಾರಿದೀಪವಾಗುತ್ತದೆ ಎಂದು ವಹ್ನಿಕುಲ ಕ್ಷತ್ರಿಯ ತಿಗಳರ ಸಂಘದ ರಾಜ್ಯಾಧ್ಯಕ್ಷ ಜಯರಾಜ್ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಯುವ ಪ್ರತಿಭೆ ಧನುಷ್ ಕುಮಾರ್ ರವರು ಉನ್ನತ ವಿದ್ಯಾಭ್ಯಾಸಕ್ಕಾಗಿ (ಯು.ಪಿ.ಎಸ್.ಸಿ) ವಹ್ನಿಕುಲ ಕ್ಷತ್ರಿಯ ತಿಗಳರ ಸಂಘದ ರಾಜ್ಯಾಧ್ಯಕ್ಷ ಜಯರಾಜ್ ರವರು ಆರ್ಥಿಕ ಸಹಾಯವನ್ನು ಶಿವನಾಪುರದ ಶ್ರೀ ಆದಿಶಕ್ತಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪ್ರಣವಾನಂದ ಮಹಾಸ್ವಾಮಿಗಳ ಮೂಲಕ ನೀಡಿ.


ಮಾತನಾಡಿ, ಜನಾಂಗದ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಬೇಕು. ವಿದ್ಯೆ ಜೀವನವನ್ನು ರೂಪಿಸುವ ಶಕ್ತಿಯಾಗಿ ಭವಿಷ್ಯದ ದಾರಿಯನ್ನು ಸುಗಮಗೊಳಿಸುತ್ತದೆ. ತಿಗಳ ಜನಾಂಗ ಎಂದೂ ಹಿಂದುಳಿಯದೆ ಮುಂದೆ ಸಾಗಬೇಕೆಂದರೆ ಜನಾಂಗದ ವಿದ್ಯಾವಂತ ಯುವಕರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯಿಂದ ಸ್ಥಾನಗಳಿಸಬೇಕು. ಜನಾಂಗಕ್ಕೆ ಕೀರ್ತಿ ತರಬೇಕು. ಇತರರಿಗೆ ಪ್ರೋತ್ಸಾಹ ನೀಡುವ ಮೂಲಕ ಜನಾಂಗದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪರಿಷತ್ ಸದಸ್ಯ ಪಿ.ಆರ್.ರಮೇಶ್, ಕ್ಷತ್ರಿಯ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ಬಣ್ಣ, ಶ್ರೀ ಆದಿಶಕ್ತಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಲಕ್ಷಣ್, ಪುರಸಭಾ ಮಾಜಿ ಸದಸ್ಯ ಚಂದ್ರಶೇಖರ್, ಹಿಂದೂಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಮುನೀಂದ್ರ ಮತ್ತಿತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top