ಬಳ್ಳಾರಿ: ಅತಿ ಹೆಚ್ಚು ಮೆಣಸಿನಕಾಯಿ ಬೆಳೆಯುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಒಂದು ಮೆಣಸಿನಕಾಯಿ ಮಾರುಕಟ್ಟೆ ಬೇಕು ಎಂದು ಈ ಭಾಗದ ರೈತರ ಬಹುದಿನಗಳ ಬೇಡಿಕೆ ಯಾಗಿತ್ತು. ಶೀಘ್ರದಲ್ಲಿಯೇ ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಭರವಸೆ ನೀಡುವ ಮೂಲಕ ಹಲವು ವರ್ಷಗಳ ಈ ಬೇಡಿಕೆಗೆ ಮನ್ನಣೆ ದೊರೆತಂತಾಗಿದೆ.
ಬಳ್ಳಾರಿ ನಗರಕ್ಕೆ ಆಗಮಿಸಿದ್ದ ಸಚಿವರು ಈ ಕುರಿತು ಮಾತನಾಡಿ, ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಎಪಿಎಂಸಿಯಿAದ ಐದು ಕೋಟಿ ರೂ. ಅನುದಾನ ನೀಡಲಿದ್ದು, ಇತರ ಮೂಲಗಳಿಂದ ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿ ಈ ಮಾರುಕಟ್ಟಯನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೃಷಿ ಸಂಬAಧಿತ ಮಾರುಕಟ್ಟೆಗಳಿಗೆ ಕೋಲ್ಡ್ ಸ್ಟೋರೇಜ್ ಅತ್ಯಗತ್ಯವಾಗಿರುವುದರಿಂದ ಪ್ರಸ್ತಾವಿತ ಚಿಲ್ಲಿ ಮಾರುಕಟ್ಟೆಯಲ್ಲಿ ಕೊಲ್ಡ್ ಸ್ಟೋರೆಜ್ ಕೂಡಾ ನಿರ್ಮಿಸಲಾಗುವುದು. ಶಾಸಕ ನಾರಾ ಭರತ್‌ರೆಡ್ಡಿ ಅವರು ಚಿಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ನೆರವು ನೀಡಲಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕೆ ಗುರುತಿಸಿರುವ 23 ಎಕರೆ ಪ್ರದೇಶ ಸಾಕಾಗುವುದಿಲ್ಲವಾದ ಕಾರಣ, ಹಾಗೂ ಭವಿಷ್ಯದ ದೃಷ್ಟಿಯಿಂದ ಕನಿಷ್ಟ 50 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುವುದು ಸೂಕ್ತ ಎಂದಿರುವ ಸಚಿವ ಶಿವಾನಂದ ಪಾಟೀಲರು, ಪಿಪಿಪಿ ಮಾಡೆಲ್‌ನಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಕಷ್ಟ ಸಾಧ್ಯ. ಹೀಗಾಗಿ ಅದರ ಬದಲು ಅಗತ್ಯ ಸಂಪನ್ಮೂಲ ಕ್ರೋಢೀಕರಣ ಮಾಡಿ ನಿರ್ಮಿಸಲು ಉದ್ದೇಶಿಸಲಾಗಿದೆ. ಎಪಿಎಂಸಿ ಸಚಿವನಾಗಿ ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆಯನ್ನು ನಿರ್ಮಾಣ ಮಾಡುವೆ ಎಂದು ಮತ್ತೊಮ್ಮ ಭರವಸೆ ನೀಡಿದರು.