ಬಳ್ಳಾರಿ : ನೂತನ ವರ್ಷಾರಂಭದಲ್ಲಿ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ಸಂಬAಧಿಸಿದAತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಭೆಯಲ್ಲಿ ಗನ್ ಫೈರಿಂಗ್ ನಡೆದು ಕಾಂಗ್ರೆಸ್ ಕಾರ್ಯಕರ್ತನ ಸಾವು ಉಂಟಾಗಿತ್ತು.
ಈ ಕುರಿತು ಬಳ್ಳಾರಿ ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರು ಜನಪ್ರತಿನಿಧಿಗಳ ನಡುವೆ ಸಂಭವಿಸಿದ ಸಂಘರ್ಷ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.
ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಪೊಲೀಸರ ಗನ್ ಹಾಗೂ ರಿವಾಲ್ವರ್‌ನಿಂದ ಫೈರಿಂಗ್ ಆಗಿಲ್ಲ, ಖಾಸಗಿ ಗನ್‌ನಿಂದ ಫೈರಿಂಗ್ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸ್ತೇವೆ. ಹತ್ಯೆಗೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆಂಬ ಆರೋಪವೂ ಇದ್ದು,ತನಿಖೆ ಆದಮೇಲೆ ಅದೆಲ್ಲ ಗೊತ್ತಾಗುತ್ತೆ. ಅಗತ್ಯಬಿದ್ದರೆ ಸಿಐಡಿಗೆ ಪ್ರಕರಣ ಕೊಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದರು.
ಬ್ಯಾನರ್ ಗಲಾಟೆ ಪ್ರಕರಣದ ತನಿಖೆ ಸಾಗುತ್ತಿರುವ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಹಲವು ಭಾರಿ ಪರೆಸ್ ಮೀಟ್ ಮಾಡಿ ಅಸಮಾಧಾನ ಹೊರ ಹಾಕಿದ್ದರು. ಶುಕ್ರವಾರದಂದು ಮತ್ತೊಮ್ಮೆ ಪತ್ರಿಕಾಘೋಷ್ಠಿ ನಡೆಸಿ, ಘಟನೆಯಲ್ಲಿ ಮೃತಪಟ್ಟಿದ್ದ ರಾಜಶೇಖರ್ ಮತೃದೇಹ ಹೂಳಲು ಮೊದಲು ಗುಂಡಿ ತೋಡಿ, ಆ ನಂತರ ಶವ ಸುಡಲಾಗಿದೆ. ಶಾಸಕ ಭರತ್ ರೆಡ್ಡಿ ನಿರ್ದೇಶನದಂತೆ ಕೊಲೆಯಾಗಿದೆ. ತಂದೆ ಸಮಾಧಿ ಬಳಿ ರಾಜಶೇಖರ್ ಅಂತ್ಯಕ್ರಿಯೆ ಆಗಬೇಕು ಎಂದಿದ್ದರು. ಆದರೆ ಹೂಳಲು ತೋಡಿದ್ದ ಗುಂಡಿ ಮುಚ್ಚುವಂತೆ ನಿರ್ದೇಶನ ಬಂದಿದೆ. ಹೀಗಾಗಿ ಸ್ಮಶಾನದಲ್ಲಿ ತೋಡಿದ್ದ ಗುಂಡಿಯನ್ನು ತೆಂಗಿನಕಾಯಿ ನೀರು ಹಾಕಿ ಮುಚ್ಚಿದ್ದಾರೆ. ಬಳಿಕ ಯಾವುದೇ ಸಾಕ್ಷ್ಯ ಸಿಗದ ಹಾಗೆ ರಾಜಶೇಖರ್ ಮೃತದೇಹವನ್ನು ಗ್ಯಾಸ್‌ನಿಂದ ಸುಡಲಾಗಿದೆ. ಘಟನೆ ನಡೆದು 9 ದಿನಗಳಾದರೂ ಒಬ್ಬ ಗನ್‌ಮ್ಯಾನ್ ಮಾತ್ರ ಬಂಧನ ಮಾಡಲಾಗಿದೆ. ಭರತ್ ರೆಡ್ಡಿಯನ್ನು ಯಾಕೆ ಬಂಧಿಸಿಲ್ಲ ಎಂದು ರೆಡ್ಡಿ ಪ್ರಶ್ನಿಸಿದ್ದರು. ಘಟನೆಗೆ ಕಾರಣಕರ್ತರಾದ ಶಾಸಕನ ಬಂಧನವಾಗಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದರು.



