ಅಗತ್ಯವೆನಿಸಿದರೆ ಯಡಿಯೂರಪ್ಪರನ್ನು ಸಿಐಡಿಯವರು ಬಂಧಿಸುತ್ತಾರೆ: ಜಿ ಪರಮೇಶ್ವರ್​

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್ಗೆ ಉತ್ತರ ನೀಡಬೇಕಾಗುತ್ತದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ‍ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಯಡಿಯೂರಪ್ಪ ಹೇಳಿದ್ದೇನು?

ಬಾಲಕಿಯ ಮೇಲೆ ಲೈಂಗಿಕ ದರ‍್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ, ಅಪಾಯ ಮನಗಂಡ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

 ಮಾರ್ಚ್ 28 ರಂದು ನೀಡಿದ್ದ ನೋಟಿಸ್ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪರ‍್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪರ‍್ವ ನರ‍್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ ೧೭ ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top