ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ಬಳ್ಳಾರಿ: ಕಂಪ್ಲಿಯ ಸೋಮಪ್ಪ‌ ಕೆರೆ ಅಭಿವೃದ್ಧಿ ಕಾಮಗಾರಿ ಹಾಗೂ ಕಂಪ್ಲಿ-ಗಂಗಾವತಿ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ‌ ಕಂಪ್ಲಿಯ ಸೋಮಪ್ಪ ಕೆರೆ ಬಳಿ ಶನಿವಾರ ರಾತ್ರಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು,ಶಾಸಕ ಜೆ.ಎನ್.ಗಣೇಶ,ಮಾಜಿ ಸಂಸದೆ ಜೆ.ಶಾಂತಾ, ಮಾಜಿ ಶಾಸಕ ಸುರೇಶಬಾಬು, ಪುರಸಭೆ ಅಧ್ಯಕ್ಷರು, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಲಿಂಗಮೂರ್ತಿ,ಎಸ್ಪಿ ಸೈದುಲು ಅಡಾವತ್, ಎಡಿಸಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್, ತಹಸೀಲ್ದಾರ ಗೌಸಿಯಾ ಬೇಗಂ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ‌ ರಮೇಶ ಸೇರಿದಂತೆ ಅನೇಕರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top