ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎ ಬಿ ಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ ಬಗ್ಗೆ ವಿವರಿಸಿದರು.
