ಬೆಂಗಳೂರು: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಿದರು.
ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, ಶಾಖಾ ಮಠದ ಪೂಜ್ಯರುಗಳಾದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮೀಜಿ, ತ್ರಿದಂಡಿ ವೆಂಕಟರಾಮಾನುಜ ಮಹಾಸ್ವಾಮೀಜಿ, ಸಮಾಜದ ಮುಖಂಡರಾದ ಹೆಚ್.ವಿಶ್ವನಾಥ್, ಸಚಿವರಾದ ಭೈರತಿ ಸುರೇಶ್, ಶಾಸಕ ಎಸ್.ಟಿ.ಸೋಮಶೇಖರ್, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಕೆ.ಎಸ್.ಈಶ್ವರಪ್ಪ ಸೇರಿ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Facebook
Twitter
LinkedIn
WhatsApp
Telegram