ಬೆಂಗಳೂರು,12 : ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲಿದೆ ಎಂದು ಅಲ್ಲಿನ ಮುಖ್ಯಮಂತ್ರಿಗಳಾದ ಪುಷ್ಕರ್ ಸಿಂಗ್ ಧಾಮಿ ಅವರು ತಿಳಿಸಿದ್ದು, ಇದು ಅತ್ಯಂತ ಮಹತ್ವದ ನಿರ್ಧಾರ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ರಾಜ್ಯಕ್ಕೆ ಏಕರೂಪ ನಾಗರಿಕ ಸಂಹಿತೆ ರೂಪಿಸಲು ಸಮಿತಿ ರಚಿಸಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಇದು ಅತ್ಯಂತ ಸ್ವಾಗತಾರ್ಹ ನಿರ್ಧಾರ ಎಂದು ತಿಳಿಸಿದ್ದಾರೆ. ಮದುವೆ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಹಕ್ಕು ಇತ್ಯಾದಿಗಳಿಗೆ ಸಂಬಂಧಿಸಿದಂತೆ ಎಲ್ಲರಿಗೂ ಒಂದೇ ರೀತಿಯ ಕಾನೂನುಗಳನ್ನು ಒದಗಿಸಲಾಗುವುದು.. ಈ ಏಕರೂಪ ನಾಗರಿಕ ಸಂಹಿತೆಯು ನಮ್ಮ ಸಂವಿಧಾನವನ್ನು ರೂಪಿಸಿದವರ ಕನಸುಗಳನ್ನು ನನಸಾಗಿಸುವ ಮತ್ತು ಸಂವಿಧಾನದ ಚೈತನ್ಯವನ್ನು ಗಟ್ಟಿಗೊಳಿಸುವತ್ತ ಒಂದು ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ಪುಷ್ಕರ್ ಸಿಂಗ್ ಧಾಮಿ ಅವರು ತಿಳಿಸಿದ್ದಾರೆ. ಇದು ಅತ್ಯಂತ ಮಹತ್ವಪೂರ್ಣ ನಿರ್ಧಾರ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.