ನಿಯಮ ಉಲ್ಲಂಘಿಸುವವರ ವಿರುದ್ಧ ಭೇದಭಾವವಿಲ್ಲದೆ ಕ್ರಮ ಸಿಎಂ

ಬೆಂಗಳೂರು,ಜ,10 : ಕೋವಿಡ್ ನಿಯಮ ಉಲ್ಲಂಘಿಸುವವರು ಯಾರೇ ಆಗಿರಲಿ. ಯಾವುದೇ ಭೇದ ಭಾವವಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆ ಕೈಗೊಂಡವರ ಪೈಕಿ 30 ಜನರ ಮೇಲೆ ಎಫ್ ಐ ಆರ್ ಆಗಿರುವ ಬಗ್ಗೆ ಪ್ರತಿಕ್ರಯಿಸಿದರು. ಪಾದಯಾತ್ರೆಯ ಸಂಘಟಕರು, ಕಾನೂನು ಉಲ್ಲಂಘನೆ ಮಾಡಿರುವವರ ಮೇಲೆ ಕಾನೂನಿನ ಕ್ರಮ ಜರುಗಿಸಲಾಗುತ್ತಿದೆ ಎಂದರು. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವವರ ಆರೋಗ್ಯದ ಚಿಂತೆ ಸರ್ಕಾರಕ್ಕಿದೆ. ಸುದೀರ್ಘವಾಗಿ ನಡೆದು ಬಂದವರ ಆರೋಗ್ಯ ತಪಾಸಣೆ , ಆರೋಗ್ಯ ಇಲಾಖೆಯ ಕರ್ತವ್ಯ.ಇದಕ್ಕೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವವರು ಇದಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.

ಕೋವಿಡ್ ನಿಯಮಗಳನ್ನು ಯಾರೇ ಉಲ್ಲಂಘಿಸಲಿ. ಅವರು ಜನಸಾಮಾನ್ಯರು ಆಗಿರಲಿ, ಎಷ್ಟೇ ದೊಡ್ಡ ಲೀಡರ್ ಆಗಿರಲಿ. ಯಾವುದೇ ಬೇಧಭಾವವಿಲ್ಲದೇ ಎಲ್ಲರ ಮೇಲೆಯೂ ಏಕರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಎಚ್ಚರಿಕೆ ಕ್ರಮ ಹೆಚ್ಚಳದ ಅಗತ್ಯ : ಕೋವಿಡ್ ಏರಿಕೆ ಹಿನ್ನೆಲೆಯಲ್ಲಿ ಎಚ್ಚರಿಕಾ ಕ್ರಮಗಳ ಹೆಚ್ಚಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆ ರಾಜ್ಯದಲ್ಲಿ 12,000 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿ 9000 ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 6.8 % ಆಗಿದ್ದರೆ, ಬೆಂಗಳೂರಿನಲ್ಲಿ 10% ಆಗಿದೆ. ಇಡೀ ದೇಶದಲ್ಲಿ ಕೋವಿಡ್ ಪ್ರಕರಣದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಆದ್ದರಿಂದ ಹೆಚ್ಚಿನ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ ಎಂದರು.

Leave a Comment

Your email address will not be published. Required fields are marked *

Translate »
Scroll to Top