ಭಾರೀ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ ವರದಿ ಸಂಪುಟ ಸಭೆಯಲ್ಲಿ ಮಂಡನೆಗೆ ಸಿಎಂ ತೀರ್ಮಾನ

Kannada Nadu
ಭಾರೀ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ ವರದಿ ಸಂಪುಟ ಸಭೆಯಲ್ಲಿ ಮಂಡನೆಗೆ ಸಿಎಂ ತೀರ್ಮಾನ

ಬೆಂಗಳೂರು: ಭಾರೀ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಮಂಡಿಸಲು ಬೇಕಾದ ಟಿಪ್ಪಣಿಗಳನ್ನು ಸಿದ್ದಪಡಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಿಗಿ ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ವರದಿಯ ಪ್ರತಿಯೊಂದು ಸಂಪುಟವು ವಿವಿಧ ಜಾತಿಗಳ ಗುಂಪಿನ ದತ್ತಾಂಶವನ್ನು ಹೊಂದಿದೆ. ವರದಿಯು ವಿಧಾನಸಭಾ ಕ್ಷೇತ್ರಗಳ ಆಧಾರದ ಮೇಲೆ ಜಾತಿ ಅಂಕಿ ಅಂಶಗಳನ್ನು ಒಳಗೊಂಡಿದೆ. ಜೊತೆಗೆ ಹಿಂದಿನ ವರದಿಗಳಲ್ಲಿ ಸೇರಿಸದ ಸಣ್ಣ ಜನಸಂಖ್ಯೆಯನ್ನು ಹೊಂದಿರುವ ಜಾತಿಗಳ ವಿವರಗಳನ್ನು ಒಳಗೊಂಡಿದೆ. ಒಟ್ಟು 1,351 ವಿವಿಧ ಜಾತಿಗಳ ಮೇಲೆ ಸಮೀಕ್ಷೆ ನಡೆಸಲಾಗಿದೆ.

ರಾಜ್ಯದ ಜಾತಿವಾರು ಅಂಕಿ ಅಂಶಗಳು ರಾಜ್ಯದಲ್ಲಿ ಒಟ್ಟು 1,351 ವಿವಿಧ ಜಾತಿಗಳ ಮೇಲೆ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ 816 ಇತರ ಹಿಂದುಳಿದ ಜಾತಿಗಳನ್ನು ಗುರುತಿಸಲಾಗಿದೆ. ಹೊಸದಾಗಿ 192 ಜಾತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಸುಮಾರು 30 ಜಾತಿಗಳನ್ನು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ 6 ಕೋಟಿ ಕನ್ನಡಿಗರಲ್ಲಿ 5.98 ಕೋಟಿ ಜನರನ್ನು ಸಮೀಕ್ಷೆಗೆ ಒಳಪಡಿಲಾಗಿದೆ. ಈ ವರದಿಯ ಅನ್ವಯ ಕರ್ನಾಟಕದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗ (ಅಹಿಂದ)ವು ರಾಜ್ಯದ ಒಟ್ಟಾರೆ ಜನಸಂಖ್ಯೆಯ ಶೇ.60ರಷ್ಟು ಇದೆ. ಅಂದರೆ 1.08 ಕೋಟಿ. ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ. ಅಂದರೆ ಮುಸ್ಲಿಮರು 70 ಲಕ್ಷ ಜನರಿದ್ದಾರೆ. ಇನ್ನು ಲಿಂಗಾಯತರು 65 ಲಕ್ಷ ಮತ್ತು ಒಕ್ಕಲಿಗ ಸಮುದಾಯ 60 ಲಕ್ಷವಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಹೀಗಾಗಿ ಪ್ರಬಲ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಿಗೆ ಹೋಲಿಸಿದರೆ ಅಲ್ಪಸಂಖ್ಯಾತ ಸಮುದಾಯವೇ ಬಹುಸಂಖ್ಯಾತರಾಗಿದ್ದಾರೆ.

ಸಮೀಕ್ಷೆ 5.98 ಕೋಟಿ ಜನರನ್ನು ಒಳಗೊಂಡಿದೆ. 3.98 ಕೋಟಿಗೂ ಹೆಚ್ಚು ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ಗುಂಪಿನವರು, 1.87 ಕೋಟಿ ಲಿಂಗಾಯತರು, ಒಕ್ಕಲಿಗರು, ಬ್ರಾಹಣರು ಮತ್ತು ಇತರ ಜಾತಿಗಳು ಇದರಲ್ಲಿ ಇವೆ. ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಕೋಟಾವನ್ನು ಹೆಚ್ಚಿಸಲು ಸಮಿತಿಯು ಶಿಫಾರಸು ಮಾಡಿದೆ. ವೀರಶೈವರು ಮತ್ತು ಲಿಂಗಾಯತರು ಒಂದೇ ಎಂದು ಸಮಿತಿ ಒತ್ತಿಹೇಳಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟು 6 ಕೋಟಿ ಕನ್ನಡಿಗರಲ್ಲಿ ಯಾವ ಜಾತಿ ಹಾಗೂ ಧರ್ಮದವರು ಎಷ್ಟು ಮಂದಿ ಇದ್ದಾರೆ ಎಂಬ ಅಂಕಿ-ಸಂಖ್ಯೆಯೂ ಬಹಿರಂಗವಾಗಿದೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಜನಸಂಖ್ಯೆಯೇ ಅಧಿಕವಾಗಿದ್ದಾರೆ ಎಂದು ತಿಳಿದು ಬಂದಿದೆ.

2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನು ಸುಮಾರು 154 ಕೋಟಿ ರೂ. ವೆಚ್ಚದಲ್ಲಿ ಮಾಡಿಸಲಾಗಿತ್ತು. ಆದರೆ ಅವರ ಅಧಿಕಾರ ಮುಗಿದ ನಂತರ ಆಳ್ವಿಕೆ ನಡೆಸಿದ ಮುಖ್ಯಮಂತ್ರಿಗಳು ಕಾರಣಾಂತರಗಳಿಂದ ವರದಿ ಸ್ವೀಕರಿಸಿರಲಿಲ್ಲ.

ಈ ಮಧ್ಯೆ ವರದಿ ಸೋರಿಕೆಯಾಗಿ, ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಹಲವರ ವಿರೋಧ :
ಆದರೆ, ಜಾತಿ ಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೊಂದು ಅವೈಜ್ಞಾನಿಕ ವರದಿ ಎಂದು ಒಕ್ಕಲಿಗ, ವೀರಶೈವಲಿಂಗಾತ ಸಮುದಾಯ ವಿರೋಧ ಮಾಡಿವೆ. ಜಾತಿ ಗಣತಿ ವರದಿ ಪರಿಷ್ಕರಣೆ ಮಾಡಬೇಕೆನ್ನುವ ಒಕ್ಕಲಿಗ ಸಮುದಾಯದ ಮನವಿ ಪತ್ರಕ್ಕೆ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಸಹಿ ಮಾಡಿದ್ದರು.

ಸುಮಾರು 350ಕ್ಕೂ ಹೆಚ್ಚು ಪುಟಗಳನ್ನು ಈ ವರದಿ ಒಳಗೊಂಡಿದೆ ಅಂತ ಆಯೋಗದ ಮೂಲಗಳು ತಿಳಿಸಿವೆ. 2014ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಇತರೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತಿಳಿಯಲು ಕಾಂತರಾಜ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಿದ್ದರು.

ರಾಜ್ಯದಾದ್ಯಂತ 1 ಲಕ್ಷ 60 ಸಾವಿರ ಸರ್ಕಾರಿ ನೌಕರರು 1 ಕೋಟಿ 30 ಲಕ್ಷ ಕುಟುಂಬಗಳನ್ನ ಭೇಟಿ ಮಾಡಿ, ದತ್ತಾಂಶವನ್ನು ಸಂಗ್ರಹಿಸಿದ್ದಾರೆ. ಇದಕ್ಕೆ ಸುಮಾರು 169 ಕೋಟಿ ಖರ್ಚಾಗಿದೆ. ಆದರೆ, ಇದು ಮನೆಯಲ್ಲೆ ಕೂತು ಮಾಡಿದ ವರದಿ ಎಂದು ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಪಿಸಿದ್ದರು.
ಸದ್ಯಕ್ಕೆ ವರದಿಯನ್ನು ಅಂಗೀಕರಿಸುವ ಸವಾಲನ್ನು ಮೈಮೇಲೆ ಎಳೆದುಕೊಳ್ಳಲು ಸರಕಾರ ಸಿದ್ಧವಿಲ್ಲ. ವರದಿಯನ್ನು ಪರಾಮರ್ಶಿಸಿ ವರದಿ ನೀಡಲು ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡುವ ಸಾಧ್ಯತೆಗಳು ಹೆಚ್ಚು ಎಂದು ಮೂಲಗಳು ಹೇಳಿವೆ.

ಜಾತಿ ಗಣತಿ ವರದಿಯಲ್ಲಿ ಏನೇನಿದೆ? :
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಸಂಪುಟಗಳನ್ನಾಗಿ ಸಿದ್ಧಪಡಿಸಲಾಗಿದೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು ಸಲ್ಲಿಸಿರುವ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ.

1.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಸಮಗ್ರ ರಾಜ್ಯ ವರದಿ
2.ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
3.ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತುಪಡಿಸಿ)
4.ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿಗಳು)
5.ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)
6.ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ-ಅಂಶಗಳು (ಎರಡು ಸಿಡಿಗಳು)
7.ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 201 ರ ದತ್ತಾಂಶಗಳ ಅಧ್ಯಯನ ವರದಿ-2024

ಯಾವ ಜಾತಿ ಎಷ್ಟು ಪ್ರಮಾಣ? :
*ಪರಿಶಿಷ್ಟ ಜಾತಿ(ಎಸ್ಸಿ)- 1.08 ಕೋಟಿ ಮಂದಿ
*ಮುಸ್ಲಿಂ- 70 ಲಕ್ಷ ಮಂದಿ
*ಲಿಂಗಾಯತರು- 65 ಲಕ್ಷ ಮಂದಿ
*ಒಕ್ಕಲಿಗರು- 60 ಲಕ್ಷ ಮಂದಿ
*ಕುರುಬರು- 45 ಲಕ್ಷ ಮಂದಿ
*ಈಡಿಗರು – 15 ಲಕ್ಷ ಮಂದಿ

*ಪರಿಶಿಷ್ಟ ಪಂಗಡ (ಎಸ್ಟಿ)- 40.45 ಲಕ್ಷ ಮಂದಿ
*ವಿಶ್ವಕರ್ಮ- 15 ಲಕ್ಷ ಮಂದಿ
*ಬೆಸ್ತರು – 15 ಲಕ್ಷ ಮಂದಿ
*ಬ್ರಾಹಣರು – 14 ಲಕ್ಷ ಮಂದಿ
*ಗೊಲ್ಲ (ಯಾದವ)- 10 ಲಕ್ಷ ಮಂದಿ

*ಮಡಿವಾಳ ಸಮಾಜ-6 ಲಕ್ಷ ಮಂದಿ
*ಅರೆ ಅಲೆಮಾರಿ- 6 ಲಕ್ಷ ಮಂದಿ
*ಕುಂಬಾರ – 5 ಲಕ್ಷ ಮಂದಿ
*ಸವಿತಾ ಸಮಾಜ- 5 ಲಕ್ಷ ಮಂದಿ

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";