ಕೆಪಿವೈಸಿಸಿಯಿಂದ ಸದಸ್ಯತ್ವ ಅಭಿಯಾನ ಆರಂಭ: ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪರ ಒಲವು – ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು, ಡಿ, 11; ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪರ ಒಲವು ವ್ಯಕ್ತವಾಗುತ್ತಿದ್ದು, ಇದನ್ನು ಮುಂಬರುವ ಚುನಾವಣೆಗೆ ಮೆಟ್ಟಿಲುಗಳನ್ನಾಗಿ ಬಳಸಿಕೊಳ್ಳಬೇಕು. ಬದಲಾವಣೆಗೆ ಈಗಿನಿಂದಲೇ ಸೂಕ್ತ ಭೂಮಿಕೆಯನ್ನು ಸಿದ್ಧಪಡಿಸಬೇಕು ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ.

ನಗರದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದತ್ತ ಜನ ಸಾಮಾನ್ಯರು ಆಸಕ್ತರಾಗುತ್ತಿದ್ದಾರೆ. ಮಾನಸಿಕವಾಗಿ ಕಾಂಗ್ರೆಸ್ ಪರ ಇರುವವರನ್ನು ಗುರುತಿಸಿ ಸದಸ್ಯರನ್ನಾಗಿ ಮಾಡಿಕೊಳ್ಳಬೇಕು. ದೇಶದ ವಿಕಾಸದಲ್ಲಿ ಕಾಂಗ್ರೆಸ್ ನ ಪಾತ್ರ ಮತ್ತು ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಸದಸ್ಯತ್ವ ಅಭಿಯಾನದಲ್ಲಿ ಯುವ ಕಾಂಗ್ರೆಸ್ ಪಾತ್ರ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ. ಹಣದುಬ್ಬರ ದಿನೇ ದಿನೇ ಏರಿಕೆಯಾಗುತ್ತಿದ್ದು, ಅಗತ್ಯ ವಸ್ತುಗಳು ಗಗನಮುಖಿಯಾಗಿವೆ. ದೈನಂದಿನ ಬದುಕು ಕ್ಲಿಷ್ಟಕರವಾಗಿದೆ. ಜನ ಸಹಜವಾಗಿ ಬದುಕಲು ಸಾಧ್ಯವಾಗದ ವಾತಾವರಣ ನಿರ್ಮಾಣ ಮಾಡಲಾಗಿದೆ. ಬದಲಾವಣೆಯ ವಾತಾವರಣದಲ್ಲಿ ಸಂಕಷ್ಟದಲ್ಲಿರುವವರನ್ನು ಪಕ್ಷದತ್ತ ಸೆಳೆಯಬೇಕು ಎಂದು ಎಂ.ಎಸ್. ರಕ್ಷಾ ರಾಮಯ್ಯ ಮನವಿ ಮಾಡಿದರು. ಸದಸ್ಯತ್ವ ಅಭಿಯಾನಕ್ಕೆ ಸ್ಥಳಿಯರಿಂದ ಉತ್ತಮ ಪ್ರತಿಕ್ರಿಯೆ ದೊರೆಯಿತು. ಹೆಚ್ಚಿನ ಪ್ರಮಾಣದಲ್ಲಿ ಸ್ವಯಂ ಪ್ರೇರಿತರಾಗಿ ಜನತೆ ಸದಸ್ಯತ್ವ ಪಡೆದುಕೊಂಡರು.\

Leave a Comment

Your email address will not be published. Required fields are marked *

Translate »
Scroll to Top