ಪಂಚಮಸಾಲಿ ಸಮಾಜ ವಾಸವಿರುವ ಗ್ರಾಮಗಳಿಗೆ ಹಿಂದುಳಿದ ವರ್ಗಗಳ ಆಯೋಗ ಭೇಟಿ-ಪರಿಶೀಲನೆ

ದಾವಣಗೆರೆ.ಡಿ.22: ಪಂಚಮಸಾಲಿ ಸಮಾಜವನ್ನು 2 ಎ ಮೀಸಲಾತಿಗೆ ಪರಿಗಣಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಿರುವ ರಾಜ್ಯ ಹಿಂದುಳಿದ ಆಯೋಗ ಇಂದು ಜಿಲ್ಲೆಯ ವಿವಿದೆಡೆ ಪಂಚಮಸಾಲಿ ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಅಧ್ಯಯನ ನಡೆಸಿತು. ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮತ್ತು ಸದಸ್ಯರ ತಂಡ ಹರಿಹರ ತಾಲ್ಲೂಕಿನ ಬನ್ನಿಕೋಡು, ದೀಟೂರು, ರಾಮತೀರ್ಥ, ಮತ್ತು ಹೊಳೆಸಿರಿಗೆರೆ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಪಂಚಮಸಾಲಿ ಸಮುದಾಯದ ಜನರನ್ನು ಭೇಟಿ ಮಾಡಿ ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಯೋಗದ ಅಧ್ಯಕ್ಷ ಡಾ.ಜಯಪ್ರಕಾಶ್ ಹೆಗ್ಡೆ, ಮೀಸಲಾತಿ ಹೆಚ್ಚಳ ಕುರಿತಂತೆ ಅನೇಕ ಸಮಾಜಗಳು ಆಯೋಗಕ್ಕೆ ಮನವಿ ಸಲ್ಲಿಸಿದ್ದು‌ ಇವುಗಳ‌ ಕೂಲಂಕಶ ಅಧ್ಯಯನ ನಡೆಸಲಾಗುತ್ತಿದೆ ಎಂದರು. ಈ ಹಿಂದಿನ ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಿದ ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಲು ಕಾನೂನಿನ ತೊಡಕು ಇದ್ದು, ಅದನ್ನು ಸರಿಪಡಿಸಿ ವರದಿ ಸಲ್ಲಿಸಲಾಗುವುದು ಎಂದು ಜಯಪ್ರಕಾಶ ಹೆಗ್ಡೆ ತಿಳಿಸಿದರು.

Leave a Comment

Your email address will not be published. Required fields are marked *

Translate »
Scroll to Top