ಡೇ-ನಲ್ಮ್ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ

ಹೊಸಪೇಟೆ, ಫೆ.01(ಕರ್ನಾಟಕ ವಾರ್ತೆ): ನಗರಸಭೆಯ ವತಿಯಿಂದ ಕೌಶಲ್ಯಾಭಿವೃಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್‌ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ(ಗುಂಪು)ಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಸಮಿತಿಯು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿವರಗಳು: ಹುದ್ದೆಯ ಹೆಸರು:ಸಮುದಾಯ ಸಂಪನ್ಮೂಲ ವ್ಯಕ್ತಿ, ಹುದ್ದೆ ಸಂಖ್ಯೆ-03, ಮಾಸಿಕ ಗೌರವಧನ : ರೂ.8ಸಾವಿರ ಮತ್ತು ಸಾರಿಗೆ 2 ಸಾವಿರ ರೂ. (ಅಗತ್ಯತೆಗೆ ತಕ್ಕಂತೆ ಗರಿಷ್ಠ). ಅರ್ಜಿ ಸಲ್ಲಿಸುವಿಕೆಗೆ ಕೊನೆಯ ದಿನಾಂಕ ಫೆ.16. ಅರ್ಹತೆಗಳು:ಕನಿಷ್ಠ ಪಿಯುಸಿ ದ್ವಿತೀಯ ವರ್ಷ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು), ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಕಾಯಂ ವಾಸವಿದ್ದು , ಕನಿಷ್ಠ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯರಾಗಿರಬೇಕು, ಆಂತರಿಕ ಸಾಲ ಪಡೆದು ಕಟುಬಾಕಿದಾರರಾಗಿರಬಾರದು, ಸರ್ಕಾರಿ/ಅರೇ ಸಕಾರಿ/ಎನ್ .ಜಿ .ಓ/ ಗಳಲ್ಲಿ ಉದ್ಯೋಗಸ್ಥರಾಗಿರಬಾರದು, ಉತ್ತಮ ಸಂವಹನ ಕೌಶಲ್ಯ ಜೋತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗೆ ಸಂಚಾರಕ್ಕೆ ಸಿದ್ದರಿರಬೇಕು.ವಯಸ್ಸು 18 ರಿಂದ 45 ವರ್ಷ ಆಗಿದೆ.

ಹೊಸಪೇಟೆ ನಗರಸಭೆ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ಅರ್ಜಿದಾರರು ಕಚೇರಿಯ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಬಹುದು.

Leave a Comment

Your email address will not be published. Required fields are marked *

Translate »
Scroll to Top