ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು : ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ರ ಅಂಗವಾಗಿ ಮತದಾರರ ಜಾಗೃತಿಗಾಗಿ ಹಮ್ಮಿಕೊಂಡಿರುವ “ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ”ಕ್ಕೆ ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಬಾಗ ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ರವರು ಚಾಲನೆ ನೀಡಿ ವೀಕ್ಷಿಸಿದರು.

2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಛೇರಿಯಿಂದ ವ್ಯಂಗ್ಯಚಿತ್ರಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಲಾವಿದರು, ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು ಸೇರಿದಂತೆ ವಿಧ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

 

ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗು ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಇಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು‌. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಮುಖ್ಯ ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನದ ವಿಶೇಷ ಅಧಿಕಾರಿಯಾದ ಸೂರ್ಯ ಸೇನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top