ಬೆಂಗಳೂರು: ರಾಜ್ಯದ ಜನರ ಆಶೀರ್ವಾದ ಪಡೆದು ಅಸ್ಥಿತ್ವಕ್ಕೆ ಬಂದಿರುವ ಪ್ರಜಾತಂತ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಪಕ್ಷಗಳು ಹಾಗೂ ರಾಜ್ಯಪಾಲರ ನಡೆಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನಾ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ಪ್ರಕರಣಗಳ ತನಿಖೆಗೆ ರಾಜ್ಯಪಾಲರು ಅನುಮತಿ ನೀಡದೆ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಅವರ ವಿರುದ್ಧದ ನಿರಾದಾರ ಆರೋಪಗಳನ್ನು ಕೂಲಂಕುಶವಾಗಿ ಪರಿಶೀಲಿಸದೇ, ಏಕಾಏಕಿಯಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಒಕ್ಕೊರಲಿನಿಂದ ಖಂಡಿಸಿದೆವು. ಬಳಿಕ ರಾಜಭವನದವರೆಗೆ ಕಾಲ್ನಡಿಗೆ ಜಾಥ ನಡೆಸಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆವು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಡಾ. ಹೆಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಡಾ. ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಭೈರತಿ ಸುರೇಶ್, ಜಮೀರ್ ಅಹ್ಮದ್, ಎನ್.ಎಸ್.ಬೋಸರಾಜ್, ಸುಧಾಕರ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಹಾಗೂ ಶಾಸಕರು, ಪಕ್ಷದ ಹಲವು ಮುಖಂಡರು ಪಾಲ್ಗೊಂಡಿದ್ದರು