ಡಿಎಂಕೆ ಏಜೆಂಟರಂತೆ ಕಾಂಗ್ರೆಸ್ ಸರಕಾರದ ವರ್ತನೆ – ಬಿ.ಎಸ್.ಯಡಿಯೂರಪ್ಪ  ಟೀಕೆ

ಬೆಂಗಳೂರು :  ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದರು.

 

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರದ ಸಂಪೂರ್ಣ ವೈಫಲ್ಯವನ್ನು ಖಂಡಿಸಿ ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿಯಿಂದ ನಡೆದ ಧರಣಿ ಸತ್ಯಾಗ್ರಹದ ಸಂದರ್ಭದಲ್ಲಿ ಮಾತನಾಡಿದ ಅವರು, ಡಿಎಂಕೆ ಜೊತೆ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಈ ಸತ್ಯಾಗ್ರಹದಲ್ಲಿ ಜೆಡಿಎಸ್ ಮುಖಂಡರೂ ಭಾಗವಹಿಸಿದ್ದರು.

ರಾಜ್ಯದ ಜನರು ಬೀದಿಗಿಳಿದು ಹೋರಾಡುತ್ತಿದ್ದು, ಬಿಜೆಪಿ- ಜೆಡಿಎಸ್ ಇದಕ್ಕೆ ಎಲ್ಲ ರೀತಿಯ ಬೆಂಬಲ ಕೊಡುತ್ತದೆ ಎಂದು ಪ್ರಕಟಿಸಿದರು. ಈಗಲಾದರೂ ಇದನ್ನು ಸರಿಪಡಿಸಿ ಎಂದು ಆಗ್ರಹಿಸಿದರು. ಇಲ್ಲವಾದರೆ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಅದಕ್ಕೆ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದರು.

Facebook
Twitter
LinkedIn
WhatsApp
Telegram
Email
Tumblr

Leave a Comment

Your email address will not be published. Required fields are marked *

Translate »
Scroll to Top