ಚಾಮರಾಜನಗರ : ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮಿಷನ್ ಹಗರಣದ ವಿರುದ್ಧ ಚಾಮರಾಜನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಹಿಳಾ ಘಟಕದ ಆಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಸಚಿವ ಪುಟ್ಟರಂಗ ಶೆಟ್ಟಿ, ಶಾಸಕರಾದ ನರೇಂದ್ರ, ಡಾ. ತಿಮ್ಮಯ್ಯ, ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಹಾಜರಿದ್ದರು.

