‘ನಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಷಡ್ಯಂತ್ರ’: ಸೂರಜ್ ರೇವಣ್ಣ

ಹಾಸನ: ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದರ‍್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ಹಗರಣದ ಆರೋಪದ ಮೇಲೆ ವಿಶೇಷ ತನಿಖಾ ತಂಡದಿಂದ ನೋಟಿಸ್ ಜಾರಿಯಾಗಿರುವ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು. ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್. ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳು ರಾಜಕೀಯವಾಗಿ ದರ‍್ಬಲಗೊಳಿಸುವ ಸಂಚು ಎಂದು ಬಣ್ಣಿಸಿದರು. ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

 

ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಲಾಗಿದೆ. ಏನು ಸಾಬೀತುಪಡಿಸಬೇಕೋ ಅದು ಅಲ್ಲಿ ಸಾಬೀತಾಗುತ್ತದೆ. ನಾನು ಹೇಗೆ ಅದಕ್ಕೆ ಪ್ರತಿಕ್ರಿಯಿಸಲು ಸಾಧ್ಯ ? ಪ್ರಜ್ವಲ್ ರೇವಣ್ಣ ಅವರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸೂರಜ್ ರೇವಣ್ಣ ಹೇಳಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top