ವಸತಿ ಶಾಲೆಯ 32 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆ

ದಾವಣಗೆರೆ,ಜ,11 : ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಪ್ರಾಚಾರ್ಯ ಸೇರಿ ಒಟ್ಟು 32 ಮಕ್ಕಳಿಗೆ ಕೊರೊನಾ ಸೋಂಕು ತಗಲಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದ ಬಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳಿಗೆ ಮಕ್ಕಳಿ ಸೋಂಕು ತಗುಲಿದೆ. ಆರರಿಂದ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಸೋಂಕು ಪತ್ತೆಯಾಗಿದೆ.

ನಾಲ್ವರು ಮಕ್ಕಳಿಗೆ ಚನ್ನಗಿರಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಉಳಿದವರಿಗೆ ಶಾಲೆಯಲ್ಲಿಯೇ ಇರಿಸಿ ತಾಲೂಕು ಆಡಳಿತ ಸೂಕ್ತ ಚಿಕಿತ್ಸೆ ಒದಗಿಸುತ್ತಿದೆ. ವಿಷಯ ತಿಳಿಸಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top