ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3 ರವರೆಗೆ ವಿಸ್ತರಿಸಿದ ‍ಕೋರ್ಟ್

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ರ‍್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ ೩ ರವರೆಗೆ ವಿಸ್ತರಿಸಿದೆ.

ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.

ವಿಚಾರಣೆ ವೇಳೆ ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲರು, ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸುವಂತೆ ಇಡಿ ಸಲ್ಲಿಸಿದ್ದ ರ‍್ಜಿಯನ್ನು ವಿರೋಧಿಸಿದರು ಮತ್ತು ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಸರ‍್ಥಿಸುವ ಯಾವುದೇ ಆಧಾರಗಳಿಲ್ಲ ಎಂದು ಹೇಳಿದರು.

 

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮರ‍್ಚ್ ೨೧ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕರ‍್ಟ್ ಜೂನ್ ೧ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ ೨ ರಂದು ಅವರು ಮತ್ತೆ ಶರಣಾಗಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top