ಬೆಳೆ ಹಾನಿ ರೈತರ ಖಾತೆಗಳಿಗೆ ೨ಕೋಟಿ ೩೧ಲಕ್ಷ ರೂ. ಜಮೆ


ರಾಯಚೂರು,ಡಿ.೦೨: ಜಿಲ್ಲೆಯಲ್ಲಿ ೨೦೨೧ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಏಳು ಹಂತಗಳಲ್ಲಿ ೧,೯೩೫ ಫಲಾನುಭವಿಗಳಿಗೆ ೨ಕೋಟಿ ೩೧ಲಕ್ಷ ರೂ.ಗಳ ಇನ್‌ಪುಟ್ಸ ಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ ಆಧಾರ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮೆ ಮಾಡಲಾಗಿದೆ. ಜಿಲ್ಲೆಯ ಮುಂಗಾರು ಹಂಗಾಮಿನ ಪ್ರವಾಹ ಅಥವಾ ಅಕಾಲಿಕ ಮಳೆ ಸಂದರ್ಭದಲ್ಲಿ ಬೆಳೆ ಹಾನಿಯಾಗಿರುವ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ ಎಂಟನೇ ಹಂತದ ೭೪೭ ರೈತರಿಗೆ ೮೭,೯೬,೦೦೮ ರೂ ಗಳ (೮೭.೯೬ ಲಕ್ಷ) ಇನ್‌ಪುಟ್ಸ ಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದ್ದು,
ಅತೀ ಶೀಘ್ರದಲ್ಲಿ ಸರ್ಕಾರದಿಂದ ನೇರವಾಗಿ ಆಧಾರ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗುವುದು ಮತ್ತು ಬಾಕಿ ಉಳಿದ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡುವ ಪ್ರಕ್ರಿಯೆ ಪ್ರಗತಿ ಹಂತದಲ್ಲಿದ್ದು, ಹಂತ ಹಂತವಾಗಿ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ಅ ವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top