ಪರಿಷತ್ ಚುನಾವಣೆ: ಜೆಡಿಎಸ್ ಜತೆ ಹೊಂದಾಣಿಕೆ; ಮಾಜಿ ಸಿಎಂ ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿಕೆ

ದಾವಣಗೆರೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ. ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರಿನಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಇಷ್ಟರಲ್ಲಿಯೇ ನಿರ್ಧಾರ ಮಾಡುತ್ತೇವೆ. ಈ ಮೂಲಕ ಪರೋಕ್ಷವಾಗಿ ಜೆಡಿಎಸ್ ಜೊತೆ ಹೊಂದಾಣಿಕೆ ವಿಚಾರವನ್ನು ಒಪ್ಪಿಕೊಂಡರು. ಈ ಬಗ್ಗೆ ಜೆಡಿಎಸ್ ಜೊತೆ ಚರ್ಚಿಸುವುದಾಗಿ ಬಿಎಸ್‌ವೈ ತಿಳಿಸಿದ್ದಾರೆ.ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ. ವಿಧಾನ ಪರಿಷತ್ ಚುನಾವಣೆಯಿಂದ ಎರಡನೇ ಸುತ್ತಿನ ಪ್ರಚಾರ ಆರಂಭವಾಗಿದೆ. ರಾಜ್ಯದಲ್ಲಿ ಕೇವಲ 20 ಸೀಟ್​ಗಳಿಗೆ ನಿಶ್ಚಿತವಾಗಿ ಸ್ಪರ್ಧೆ ಮಾಡುತ್ತೇವೆ. ಇದರಲ್ಲಿ 15 ಸೀಟ್ ಗೆದ್ದೇ ಗೆಲ್ಲುತ್ತೇವೆ. ವಿಧಾನ ಪರಿಷತ್​ನಲ್ಲಿ ಸ್ಪಷ್ಟ ಬಹುಮತ ಸಿಗಲಿ ನಿರೀಕ್ಷೆ ಇದೆ. ಎಲ್ಲಾ ಕಡೆ ಬಿಜೆಪಿ ಪರ ವಾತಾವರಣವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *

Translate »
Scroll to Top