ರಾಜ್ಯದಲ್ಲಿ ಬಿಜೆಪಿ ಪರ ದಿನೇ ದಿನೇ ವಾತಾವರಣ ತುಂಬಾ ಚೆನ್ನಾಗಿದೆ.  28 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬುದು ನಮ್ಮ ಅಪೇಕ್ಷೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಪರ ದಿನೇ ದಿನೇ ವಾತಾವರಣ ತುಂಬಾ ಚೆನ್ನಾಗಿದೆ.  28 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬುದು ನಮ್ಮ ಅಪೇಕ್ಷೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಸಿದ ಅವರು, 28ಕ್ಕೆ 28 ಕ್ಷೇತ್ರ ಗೆಲ್ಲಬೇಕು.

 

ನೋಡೊಣ, ಮತದಾರರು ಏನು ಮಾಡ್ತಾರೆ‌.  ನಮ್ಮ ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದೇವೆ ಎಂದರು.

ನಾಳೆ ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಮೋದಿಯವರು ಮೈಸೂರು ಹಾಗೂ  ಮಂಗಳೂರಿಗೆ ಬರುತ್ತಿದ್ದಾರೆ. ನಾಳೆ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ನಾನು ಭಾಗವಹಿಸುತ್ತಿದ್ದೇನೆ ಎಂದು ತಿಳಿಸಿದರು.

ಇವತ್ತು ಮೊಳಕಲ್ಮೂರು, ಚಳ್ಳಕೆರೆ ಹಿರಿಯೂರಲ್ಲಿ ಪ್ರಚಾರ ಇದೆ. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತೇನೆ.

ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ, ನೋಡೋಣ ಅದು ಪಾರ್ಟಿಗೆ ಬಿಟ್ಟಿದ್ದು. ಮೋದಿಯವ ಭಾವಚಿತ್ರ ಹಿಡಿದು ಮತ ಕೇಳಿದ್ದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಒಳ್ಳೆಯದೇ ತಪ್ಪೇನಿಲ್ಲ, ಅದರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.

 

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಆರೋಪಿಗಳ ಬಂಧನ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಬಹಳ ಕಷ್ಟ ಪಟ್ಟು ಹಿಡಿದಿದ್ದಾರೆ. ಬಂಧನ ಮಾಡಿರುವುದು ಒಳ್ಳೆಯ ವಿಚಾರ. ಅವರಿಗೆ ತಕ್ಕ ಪಾಠ ಕಲಿಸಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಆರೋಪಿಗಳಿಗೆ ಸರಿಯಾದ ಶಿಕ್ಷೆ ಆಗಬೇಕು

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top