ದೇವರಾಜೇಗೌಡ ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು ಎಂದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ತಿದ್ದಂತೆ, ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಂಖಡ, ವಕೀಲ ದೇವರಾಜೇಗೌಡ (ಆevಚಿಡಿಚಿರಿegoತಿಜಚಿ) ನಿನ್ನೆ ಇದೆರೆಲ್ಲದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (ಆಏ Shivಚಿಞumಚಿಡಿ), ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಾನು ದೇವರಾಜೇಗೌಡ ಜತೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷ ಎಂದ ಮೇಲೆ ಸಾವಿರಾರು ಜನ ಭೇಟಿಯಾಗಿ ಹೋಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದಿದ್ದಾರೆ.

ಆರೋಪ ಮಾಡಬೇಕು ಮಾಡುತ್ತಾರೆ. ಏನೇನೊ ಆಗುತ್ತೆ ನೀವು ದೊಡ್ಡದಾಗಿ ಮಾಡುತ್ತಿದ್ದೀರಿ. ಮಾಧ್ಯಮಗಳಿಗೆ ನಿಮ್ಮದೇ ಆದ ಇಮೇಜ್ ಇದೆ. ಮುಖಪುಟದಲ್ಲಿ ನ್ಯೂಸ್ ಕೂಡ ಆಗಿದೆ. ಅವರ ಬಗ್ಗೆ ಅಲ್ಲ, ನಿಮ್ಮ ಬಗ್ಗೆ ಬೇಜಾರ್ ಆಗುತ್ತಿದೆ ಎಂದು ಹೇಳಿದ್ದಾರೆ.

ಪೆನ್ಡ್ರೈವ್ ಬಗ್ಗೆ ಹೆಚ್.ಡಿ.ದೇವೇಗೌಡ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ದೇವೇಗೌಡರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತೇನೆ. ದೇವರು ಸಂತೋಷ ನೀಡಲಿ, ಆಯಸ್ಸು ನೀಡಲಿ. ರ‍್ಕಾರದ ಪರ ದೇವೇಗೌಡರಿಗೆ ಶುಭ ಹಾರೈಸುತ್ತೇನೆ ಎಂದರು.

ಯಾರು ಅನುಮತಿ ಕೊಟ್ಟರು ಅಂತಾ ಅವರೇ ಹೇಳಬೇಕು

ಬಿಡಿಎ ಕಾಂಪ್ಲೆಕ್ಸ್ಗಳನ್ನು ತೆರವು ಮಾಡಲಾಗುತ್ತಿದ್ದೆ ಎಂದು ವಿರೋಧ ಪಕ್ಷದ ನಾಯಕ ಆರೋಪ ವಿಚಾರವಾಗಿ ಮಾತನಾಡಿದ್ದು, ಯಾರು ಅನುಮತಿ ಕೊಟ್ಟರು ಅಂತಾ ಅವರೇ ಹೇಳಬೇಕು. ನಾನು ಎಲ್ಲಾ ಮಾಹಿತಿ ಪಡೆದುಕೊಂಡಿದ್ದೇನೆ. ಬೊಮ್ಮಾಯಿ ಅವಧಿಯಲ್ಲೇ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅವರೇ ಸಮಿತಿ ಮಾಡಿದ್ದರು.

 

ಲೀಸ್ ಕೊಟ್ಟಿದ್ದು ಇದರಿಂದ ರ‍್ಕಾರಕ್ಕೆ ಆದಾಯ ಬರುತ್ತೆ. ಹಿಂದಿನ ರ‍್ಕಾರದ ನರ‍್ಧಾರವನ್ನೇ ಈಗ ಅನುಸರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top