ಬೆಂಗಳೂರು : ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಧರ್ಮಪತ್ನಿ ಹಾಗೂ ಸ್ವತಃ ಬರಹಗಾರ್ತಿಯೂ ಆಗಿದ್ದ ರಾಜೇಶ್ವರಿ ತೇಜಸ್ವಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ರಾಜೇಶ್ವರಿ ತೇಜಸ್ವಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಪತಿ ಪೂರ್ಣಚಂದ್ರ ತೇಜಸ್ವಿಯವರ ಕುರಿತು ಅವರು ‘ನನ್ನ ತೇಜಸ್ವಿ’ ಎಂಬ ಪುಸ್ತಕ ಬರೆದಿದ್ದರು. ಜತೆಗೆ ‘ನಮ್ಮ ಮನೆಗೂ ಬಂದರು ಗಾಂಧಿ’ ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಅಗಲಿಕೆ ನೋವು ತಂದಿದೆ. ರಾಜೇಶ್ವರಿ ತೇಜಸ್ವಿ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅವರ ಎಲ್ಲ ಓದುಗರಿಗೂ ದೇವರು ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
