ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು ಮೃತಪಟ್ಟವರ ಸಂಖ್ಯೆ 29 ಕ್ಕೆ ಏರಿಕೆ, ಸಿಬಿ ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ೨೯ಕ್ಕೆ ಏರಿಕೆಯಾಗಿದ್ದು, ೬೦ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ಈ ಮಾಹಿತಿ ನೀಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕುರಿತು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ತಮಿಳುನಾಡಿನ ಕಲ್ಲಕುರಿಚಿ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ೨೯ಕ್ಕೆ ಏರಿಕೆಯಾಗಿದೆ. ಕಳ್ಳಭಟ್ಟಿ ಕುಡಿದ ಪರಿಣಾಮ ೨೯ ಮಂದಿ ಮೃತಪಟ್ಟಿದ್ದು ೬೦ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಿಬಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಲ್ಲಕುರಿಚಿ ರ‍್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಸ್ವಸ್ಥರ ಚಿಕಿತ್ಸೆ ನಡೆಯುತ್ತಿದೆ.ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಈ ಪ್ರಕರಣದಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಮತ್ತು ದುಃಖವಾಗಿದೆ. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ತಕ್ಷಣವೇ ಸಮಾಜವನ್ನು ಹಾಳುಗೆಡವುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸರ‍್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಟಾಲಿನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾವಿನ ವರದಿ ಹೊರಬಿದ್ದ ಕೂಡಲೇ ಡಿಎಂಕೆ ರ‍್ಕಾರ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ರ‍್ಗಾವಣೆ ಮಾಡಿದೆ.

ಕಲ್ಲಕುರಿಚಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ಪ್ರಶಾಂತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಂಕೆ ಸ್ಟಾಲಿನ್ ನೇತೃತ್ವದ ರ‍್ಕಾರ ಕಲ್ಲಕುರಿಚಿ ಎಸ್ಪಿ ಸಮಯಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಿದೆ ಮತ್ತು ರಜತ್ ಚತರ‍್ವೇದಿ ಅವರನ್ನು ಹೊಸ ಎಸ್ಪಿಯಾಗಿ ನೇಮಿಸಿದೆ.

 

ಹೆಚ್ಚುವರಿಯಾಗಿ, ಕಲ್ಲಕುರಿಚಿ ಜಿಲ್ಲೆಯ ನಿಷೇಧಿತ ವಿಭಾಗದವರು ಸೇರಿದಂತೆ ಒಂಬತ್ತು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top