ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 21 ಕ್ಕೆ ಬೆಂಗಳೂರಿಗೆ

ದೇವನಹಳ್ಳಿ: ಇದೇ ಏಪ್ರಿಲ್ 21 ನೇ ತಾರೀಖು ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಆಮ್ ಆದ್ಮಿ ಪಕ್ಷದ ವತಿಯಿಂದ ‌ಏರ್ಪಡಿಸಿರುವ ಬೃಹತ್ ರೈತರ ಸಮಾವೇಶದಲ್ಲಿ ದೆಹಲಿಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿರುವ ಬದಲಾವಣೆಯ ಹರಿಕಾರ ಆಮ್ ಆದ್ಮಿ ಪಕ್ಷದ ನಾಯಕ ದೆಹಲಿ ಮುಖ್ಯಮಂತ್ರಿ ಶ್ರೀ ಅರವಿಂದ್ ಕೇಜ್ರಿವಾಲ್ ರವರು ಭಾಗವಹಿಸುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ಜನ ಸಾಮಾನ್ಯರು ಆಗಮಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಮ್ ಆದ್ಮಿ ಪಕ್ಷದ ಉಸ್ತುವಾರಿ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಿ.ಕೆ.ಶಿವಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಡೀ ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ.ಕಾಂಗ್ರೇಸ್, ಜೆಡಿಎಸ್ ಬಿಜೆಪಿ ಆಡಳಿತವನ್ನು ನೋಡಿ ಜನ ಬೇಸತ್ತಿದ್ದಾರೆ.ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿರುವುದರಿಂದ ಹಾಗೂ ಜನಸಾಮಾನ್ಯರಿಗೆ ಉಚಿತವಾಗಿ ಕುಡಿಯುವ ನೀರು, ವಿದ್ಯುತ್, ಶಿಕ್ಷಣ, ಆರೋಗ್ಯ,ಮನೆ ಬಾಗಿಲಿಗೇ ಪಡಿತರ ವಿತರಣೆ, ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಸೇರಿದಂತೆ ಉತ್ತಮ ಶಾಲೆ, ಗ್ರಂಥಾಲಯ,ರಸ್ತೆ, ಚರಂಡಿ ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ಸತತವಾಗಿ ಮೂರನೇ ಬಾರಿಗೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಪೊರಕೆ ಗುರುತಿಗೆ ಮತ ನೀಡಿ ಜನರ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ಇದನ್ನು ನೋಡಿದ ಪಂಜಾಬ್ ರಾಜ್ಯದ ಜನ ನಮಗೂ ದೆಹಲಿ ಮಾದರಿ ಜನಸಾಮಾನ್ಯರ ಆಡಳಿತ ಬೇಕು ಎಂದು ಬಯಸಿ ಆಮ್ ಆದ್ಮಿ ಪಕ್ಷದ ಪೊರಕೆ ಗುರುತಿಗೆ ಮತ ನೀಡಿ ಅತ್ಯಂತ ಹೆಚ್ಚಿನ ಬಹುಮತದೊಂದಿಗೆ ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.

ಈಗ ಕರ್ನಾಟಕದ ಅವಧಿಯಾಗಿದ್ದು ದೆಹಲಿ ಮತ್ತು ಪಂಜಾಬ್ ಮಾದರಿ ಆಡಳಿತಕ್ಕಾಗಿ 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಲು ಈಗಾಗಲೇ ಕರ್ನಾಟಕದ ಜನ ನಿರ್ಧರಿಸಿ ಆಗಿದೆ.ಅದಕ್ಕಾಗಿ ದೆಹಲಿ ಮುಖ್ಯಮಂತ್ರಿ ಶ್ರೀ ಅರವಿಂದ್ ಕೇಜ್ರಿವಾಲ್ ರವರು ಇದೇ 21 ನೇ ತಾರೀಖು ಬೆಂಗಳೂರಿಗೆ ಬರುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕೆಂದು ವಿನಂತಿಸಿದರು. ಈ ಸಂದರ್ಭದಲ್ಲಿ ಜಾಲಿಗೆ ವೆಂಕಟೇಶ್, ಬೈಚಾಪುರ ಕುಮಾರಪ್ಪ, ಬಚ್ಚಹಳ್ಳಿ ಜಯಕುಮಾರ್,ವೆಂಕಟೇನಹಳ್ಳಿ ದೇವರಾಜ್, ನರಸಿಂಹ ಮೂರ್ತಿ, ಬೈಚಾಪುರ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top