ಇಂದಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ವೈಫಲ್ಯಗಳು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮತಗಳಾಗಿ ಪರಿವರ್ತನೆಗೊಳ್ಳುವುದರಲ್ಲಿ ಸಂಶಯವಿಲ್ಲಾ ಜನತೆಗೆ ಪರ್ಯಾಯ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಒಂದೇ ಎಲ್ಲಾ ಸಮುದಾಯದ ಎಲ್ಲಾ ವರ್ಗದ ಜನರ ಪರವಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷ ಆದ್ದರಿಂದ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ ಯಶಸ್ವಿಗೊಳಿಸೋಣ ಎಂದು ಮಾಜಿ ಸಚಿವೆ ಹಾಗೂ ಕೆಪಿಸಿಸಿ ವೀಕ್ಷಕರಾದ ರಾಣಿ ಸತೀಶ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕು ಚಿಕ್ಕಸೊಣ್ಣೆ ಗೇಟ್ ಬಳಿಯ ಎಸ್.ಎಸ್.ಬಿ ಕನ್ವೆನ್ಷನ್ ಹಾಲ್ ನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ ಮತ್ತು ಕಾಂಗ್ರೆಸ್ ಕಾರ್ಯಾಗಾರ ಚಾಲನೆ ನೀಡಿ ಮಾತನಾಡಿ, ಪಕ್ಷದಲ್ಲಿ ಅನೇಕ ಭಿನ್ನಾಭಿಪ್ರಾಯ ಬರುತ್ತದೆ ಅದನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಯಾವ ಯಾವ ಕಾರ್ಯಕ್ರಮ ರೂಪಿಸಿಕೊಂಡು ಅದರ ಬಗ್ಗೆ ಚಿಂತನೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಆರಿಸಿ ವಿಧಾನಸಭೆಗೆ ಕಳಿಸಿಬೇಕೆಂದು ತಿಳಿಸಿದರು.ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಇಬ್ಬರಿಂದ ಐವರನ್ನು ಚೀಫ್ ಎನ್ರೋಲರ್ ಮಾಡಿದ್ದು ಅದರಲ್ಲಿ ಎ.ಐ.ಸಿ.ಸಿ ಯಿಂದಲೇ ಸೂಚಿಸಿದಂತೆ ಮಹಿಳೆಯರನ್ನು ಖಡ್ಡಾಯವಾಗಿ ಸೇರಿಸಿಕೊಂಡು ನೊಂದಣಿ ಅಭಿಯಾನ ಜವಾಬ್ದಾರಿಯುತವಾಗಿ ಯಶಸ್ವಿಗೊಳಿಸಬೇಕು ಮುಂದಿನ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಅನುಕೂಲವಾಗುತ್ತದೆ.ಸರ್ಕಾರ ಯಾವುದೇ ಜನಪರವಾದಂತ ಕಾರ್ಯ ಮಾಡುತ್ತಿಲ್ಲಾ ರಾಗಿ ಖರೀದಿಯಲ್ಲು ತಾರತಮ್ಯ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ರವಿ ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಜಿಲ್ಲಾಧ್ಯಕ್ಷ ಮುನಿಶಾಮಣ್ಣ, ಮಾಜಿ ಶಾಸಕ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ವೀಕ್ಷಕರಾದ ನಾಗಲಕ್ಷ್ಮೀ ಚೌದರಿ, ಶಾಸಕ ವೆಂಕಟರಮಣಯ್ಯ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಉಪಾಧ್ಯಕ್ಷ ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಹಾಗೂ ದೊಡ್ಡಬಳ್ಳಾಪುರ, ನೆಲಮಂಗಲ, ಹಾಗೂ ಹೊಸಕೋಟೆ ತಾಲ್ಲೂಕು ಕಾಂಗ್ರೆಸ್ ಮುಖಂಡರು ಇದ್ದರು.