ದೇವನಹಳ್ಳಿ : ಕನ್ನಮಂಗಲ ಗ್ರಾಮಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆಗಳಿಗೂ ಉಚಿತವಾಗಿ ನೀರಿನ ಟ್ಯಾಪ್ ಅಳವಡಿಸಲು ೧೪ನೇ ಹಣಕಾಸು ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕನ್ನಮಂಗಲ ಗ್ರಾಮಪಂಚಾಯತಿ ಅಧ್ಯಕ್ಷ್ಷ ಕೆ.ಆರ್.ನಾಗೇಶ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕು ಕನ್ನಮಂಗಲ ಗ್ರಾಮದಲ್ಲಿ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿ ಪ್ರತಿ ಮನೆಗೆ ಉಚಿತವಾಗಿ ನೀರಿನ ಸಂಪರ್ಕ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. ಹಾಗು ಪಂಚಾಯತಿ ವ್ಯಾಪ್ತಿಯ ಪ್ರತಿ ಗ್ರಾಮಗಳ ಸರ್ಕಲ್ಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ೨೬ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ, ಹಾಗು ಪೂಜನಹಳ್ಳಿಯ ಎಲ್ಲಾ ರಸ್ತೆಗಳಿಗೆ ಸೋಲಾರ್ ದೀಪ ಅಳವಡಿಸಲಾಗುತ್ತಿದೆ ಮತ್ತು ಕನ್ನಮಂಗಲ ಗ್ರಾಮದಲ್ಲಿ ಚರಂಡಿ ಕಾಮಗಾರಿಯೂ ಪ್ರಗತಿಯಲ್ಲಿದ್ದು ಎಲ್ಲಾ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಅನುವುಮಾಡಿಕೊಡಲಾಗುವುದು. ಪ್ರತಿ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಸರಕಾರದಿಂದ ಬರುವ ಅನುದಾನ ಹಾಗೂ ಪಂಚಾಯತಿಯ ಅನುದಾನ ದಲ್ಲಿ ಎಲ್ಲಾ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದರು.