ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ರಾ? ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ

ಬೆಂಗಳೂರು: ಪ್ರಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿರುವ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಕ್ಕೆ ನಿಮ್ಮ ಮಗನನ್ನು ಸಾಯಲಿ ಅಂತಲೇ ಕಳಿಸಿದಿರಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ತಮ್ಮ ನಿವಾಸದ ಬಳಿ ಸಿಎಂ ಹೇಳಿಕೆ ಕುರಿತು ಮಾತನಾಡಿದ ಕುಮಾರಸ್ವಾಮಿ, ಯಾರಿಗೆ ಆಗಲಿ ನೋವು ನೋವೇ. ನಿಮ್ಮ ಕುಟುಂಬದಲ್ಲಿ ಒಂದು ಘಟನೆ ನಡೆದಿದೆ. ಆಗ ನಿಮ್ಮ ಮಗನನ್ನು ನೀವೇ ಕಳಿಸಿದಿರಾ? ಅವರ ಸಾವಿಗೆ ನೀವೇ ಕಾರಣರಾ? ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ರಾಜತಾಂತ್ರಿಕ ಪಾಸ್ ಪರ‍್ಟ್ ಬಗ್ಗೆ ಇವರೆಲ್ಲಾ ಮಾತನಾಡುತ್ತಿದ್ದಾರೆ. ಆದರೆ ಇವರಿಗೆ ಕಾನೂನಿನ ತಿಳಿವಳಿಕೆಯೇ ಇಲ್ಲ. ಈಗ ಪ್ರಜ್ವಲ್ ಗೆ ವಾಪಸ್ ಕರೆದುಕೊಂಡು ಬರಲು ಪತ್ರ ಬರೆದಿದ್ದಾರೆ. ರಾಜತಾಂತ್ರಿಕ ಪಾಸ್ ಪರ‍್ಟ್ ರದ್ದು ಮಾಡಬೇಕು ಎಂದು ಕೇಳಿದ್ದಾರೆ. ತಕ್ಷಣಕ್ಕೆ ಅದು ಸಾಧ್ಯವಿಲ್ಲ ಎಂದು ಅವರು ಹೇಳಿದರು.

 

ದೇವೇಗೌಡರೇನು ಎಂದು ಸಿದ್ದರಾಮಯ್ಯಗೆ ಗೊತ್ತಿಲ್ಲವೇ? ಇದೆಲ್ಲಾ ಪ್ರಕ್ರಿಯೆ ಸಾಕಷ್ಟು ದಿನ ಆಗಬಹುದು ಎನ್ನುವ ಕಾರಣಕ್ಕೆ ತಕ್ಷಣ ವಾಪಸ್ ಬಂದು ತನಿಖೆಗೆ ಹಾಜರಾಗು ಎಂದು ಪ್ರಜ್ವಲ್ ಗೆ ಸಂದೇಶ ಕೊಟ್ಟಿದ್ದೇನೆ. ದೇವೇಗೌಡರು ಕೊನೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಮಾಧ್ಯಮ ಹೇಳಿಕೆ ಮೂಲಕ ದೇವೇಗೌಡರು ನೀಡಿದ ಎಚ್ಚರಿಕೆ ಬಗ್ಗೆ ಮುಖ್ಯಮಂತ್ರಿಗಳು ಹಗುರವಾಗಿ ಮಾತಮಾಡುತ್ತಿದ್ದಾರೆ. ಎಷ್ಟು ರ‍್ಷ ಇವರು ದೇವೆಗೌಡರ ಜತೆ ಕೆಲಸ ಮಾಡಿದ್ದಾರೆ? ಅವರು ಯಾವ ರೀತಿ ರಾಜಕಾರಣ ಮಾಡಿದ್ದಾರೆ ಎನ್ನುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಅದೇ ನಿಮ್ಮ ಕುಟುಂಬಕ್ಕೆ ಅನ್ವಯಿಸಿಕೊಂಡು ನೋಡಿ, ಆ ನೋವು ಏನು ಎನ್ನುವುದು ಗೊತ್ತಾಗುತ್ತದೆ. ನಿಮಗೆ ನಾಚಿಕೆ ಆಗೋದಿಲ್ಲವೇ? ತೆನಿಖೆಯ ದಾರಿ ತಪ್ಪಿಸುವ ಕೆಲಸ ನಾನು ಮಾಡಿದೆನಾ? ಎಂದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಕೆಂಡಾಮಂಡಲರಾದರು.

ದೇವರಾಜೇಗೌಡ, ಶಿವರಾಮೇಗೌಡ, ಡಿಕೆಶಿ ಮಾತನಾಡಿದ್ದು ಯಾಕೆ?: ಇದೊಂದು ರಾಜಕೀಯ ಪಕ್ಷವಾ? ಇವರಿಗೆ ಗೌರವ ಇದೆಯಾ? ಮಾನ ಮರ‍್ಯಾದೆ ಇದೆಯಾ? ಅದೇ ನಿಮ್ಮ ಡಿ.ಕೆ.ಶಿವಕುಮಾರ್, ಅದೇ ಸಿಡಿ ಶಿವು ಮಾಡಿದ್ದು ಗೊತ್ತಿಲ್ಲವೇ? ಆ ವ್ಯಕ್ತಿಯನ್ನು ಶಿವಕುಮಾರ್ ಎನ್ನುವುದು ಉಪಯೋಗಕ್ಕೆ ಬರೋದಿಲ್ಲ. ಅವರನ್ನು ಸಿಡಿ ಶಿವು ಅಂತಲೇ ಕರೆಯಬೇಕು. ಯಾಕಪ್ಪ ಸೀಡಿ ಶಿವು ಬ್ರೋಕರ್ ಶಿವರಾಮೇಗೌಡ ಜತೆ ಮಾತನಾಡಿದೆ? ಎಂದು ಡಿಸಿಎಂ ಡಿಕೆಶಿಯನ್ನು ನೇರವಾಗಿ ಪ್ರಶ್ನಿಸಿದರು.

ತಲೆ ಹಿಡಿಯುವ ಕೆಲಸ ಮಾಡುತ್ತಿರುವುದು ಯಾರು?ಇಡೀ ಪ್ರಕರಣದಲ್ಲಿ ಇವರು ಯಾರದ್ದು ಪಾತ್ರ ಇಲ್ಲ ಎಂದರೆ ದೇವರಾಜೇಗೌಡ, ಶಿವರಾಮೇಗೌಡ, ಡಿ.ಕೆ.ಶಿವಕುಮಾರ್ ಯಾಕೆ ಮಾತನಾಡಿದರು? ಇನ್ನು ಏನಾದರೂ ಸಾಕ್ಷ್ಯ, ಮೆಟಿರಿಯಲ್ ಇದೆಯಾ? ಅಂತ ಯಾಕೆ ಕೇಳಿದರು? ಬ್ರೋಕರ್ ಕೆಲಸ, ತಲೆ ಹಿಡಿಯುವ ಕೆಲಸ ಮಾಡುತ್ತಿರುವುದು ಅವರು. ನನ್ನ ಬಗ್ಗೆ ಪಕ್ಷದಿಂದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಅವಹೇಳನ ಮಾಡುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಾ? ಎಂದು ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದರು.

ಗೃಹ ಸಚಿವರು ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಲಿ. ನಮ್ಮದೇನೂ ತಕರಾರು ಇಲ್ಲ. ನಿಮಗೂ ತಂದೆ ತಾಯಿ ಇದ್ದಾರೆ. ಒಡಹುಟ್ಟಿದ ಅಕ್ಕತಂಗಿಯರಿದ್ದಾರೆ. ರ‍್ಥ ಮಾಡಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಚನ್ನಗಿರಿ ಪ್ರಕರಣ; ಅಧಿಕಾರಿಗಳಿಗೆ ನಿಯಂತ್ರಣ ಇಲ್ಲ : ಸರಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ, ಯಾಕಂದರೆ ಸರಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಬಳಕೆ ಮಾಡಿಕೊಂಡಿದ್ದಾರೆ ಸರಕಾರದವರು. ಅದರಿಂದ ರಾಜ್ಯದಲ್ಲಿ ಕಾನೂನು ಸಂಪರ‍್ಣ ಕುಸಿತವಾಗಿದೆ. ಇದು ಸರಕಾರದ ಸ್ವಯಂಕೃತ ಅಪರಾಧ. ಈ ಸರಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top