ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂದಿಗಳಿಗೆ ನೇರ ಸಂದರ್ಶನ ಮಾ.21ರಿಂದ

ಬಳ್ಳಾರಿ : ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗಿರುವುದರಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿನ ಬಂದಿಗಳಿಗೆ ಇದೇ ಮಾ.21ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ ಎಂದು ಕಾರಾಗೃಹದ ಅಧೀಕ್ಷಕ ಡಾ.ಮಲ್ಲಿಕಾರ್ಜುನ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ವಯ ಸಂದರ್ಶನವನ್ನು ಪುನರಾರಂಭಿಸಲಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧತ ಸಂದರ್ಶನವನ್ನು ಮಾತ್ರ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಬಂದಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೇ ಕಾರಾಗೃಹ ಈ ಕೆಳಕಂಡ ಇ-ಮೇಲ್ /ವಾಟ್ಸಾಪ್ ದೂರವಾಣಿ ಮುಖಾಂತರ ಸಂಪರ್ಕಸಿ ವಿವರಗಳೊಂದಿಗೆ ಸಂದರ್ಶನಕ್ಕೆ ನೋಂದಾಯಿಸಿ ನಿಗಧಿಪಡಿಸುವ ದಿನ ಮತ್ತು ಸಮಯಕ್ಕೆ ಸಂದರ್ಶನ ಅಗಮಿಸಬೇಕು ಎಂದು ಅವರು ತಿಳಿಸಿದ್ದಾರೆ.


ಬಳ್ಳಾರಿ ಕೇಂದ್ರ ಕಾರಾಗೃಹದ ಸ್ಥಿರ ದೂರವಾಣಿ ಸಂಖ್ಯೆ : 08392-255025 ಮತ್ತು ಮೊಬೈಲ್ ಸಂಖ್ಯೆ:9480806517, ಕಾರಾಗೃಹದ ಇ-ಮೇಲ್ ವಿಳಾಸ -cpbly.prisons-kar@gov.in. ಸಂದರ್ಶನಕ್ಕೆ ಬರುವ ಸಂದರ್ಶಕರು ಯಾವುದೇ ರೀತಿಯ ಕೋವಿಡ್ ರೋಗ ಲಕ್ಷಣಗಳನ್ನು ಹೊಂದಿರಬಾರದು ಹಾಗೂ ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆಗಳನ್ನು ಹಾಕಿಸಿಕೊಂಡಿರುವ ಕುರಿತು ಲಸಿಕಾ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಸಂದರ್ಶಕರುಗಳು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top