ವಿಧಾನಪರಿಷತ್ ಚುನಾವಣೆ ಬಗ್ಗೆ ಜೆಡಿಎಸ್ ಜೊತೆ ಚರ್ಚೆ: ವಿಜಯೇಂದ್ರ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯರು ಸಭೆ ಸೇರಿ ಮುಂದಿನ ವಿಧಾನಪರಿಷತ್ ಉಪ ಚುನಾವಣೆ, ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆ ಕುರಿತು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

 

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾಗಿ ಚರ್ಚೆ ಆಗಿದೆ. ಚರ್ಚಿತ ಅಂಶಗಳ ಕುರಿತಂತೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಅತಿ ಶೀಘ್ರವೇ ಅಭ್ಯರ್ಥಿಗಳ ಘೋಷಣೆಗೆ ತೀರ್ಮಾನಿಸಿದ್ದೇವೆ. ಅರ್ಥಪೂರ್ಣ ಚರ್ಚೆ ನಡೆದಿದೆ. ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗುವ ಸಮಸ್ಯೆ ಇಲ್ಲ ಎಂದು ನುಡಿದರು.

ಲೋಕಸಭೆ ಚುನಾವಣೆ ಸಂಬಂಧ ಮುಂದಿನ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಮಾನ್ಯ ಯಡಿಯೂರಪ್ಪನವರು, ಜಡಿಎಸ್‍ನ ಮಾನ್ಯ ಕುಮಾರಸ್ವಾಮಿಯವರು ಸೇರಿ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ವಿಷಯದಲ್ಲಿ ಗೊಂದಲ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾದ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು.

 

ರಜೆ ಪ್ರಕಟಿಸಲು ಆಗ್ರಹ: ನಾಳೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸಾರ್ವಜನಿಕ ರಜೆ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು. ಸಿದ್ದರಾಮಯ್ಯನವರು ಈಗಲಾದರೂ ಈ ಕುರಿತು ನಿರ್ಧಾರ ಮಾಡಬೇಕಿದೆ ಎಂದು ಅವರು ಒತ್ತಾಯಿಸಿದರು.

Facebook
Twitter
LinkedIn
Telegram
Email
WhatsApp
Print

Leave a Comment

Your email address will not be published. Required fields are marked *

Translate »
Scroll to Top