ರೈತರಿಗೆ ಉತ್ತಮ ಗುಣಮಟ್ಟ ಬಿತ್ತನೆಬೀಜ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ನಿಗದಿತ ಗುಣಮಟ್ಟದ ಬಿತ್ತನೆಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದ್ದು, ಸಕಾಲದಲ್ಲಿ ರೈತರಿಗೆ ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಟ್ಟೀಟ್ ಮಾಡಿರುವ ಅವರು, ಕಳಪೆ ಬಿತ್ತನೆಬೀಜ ಮತ್ತು ರಸಗೊಬ್ಬರ ಸರಬರಾಜು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಇಲಾಖೆಯ ಕಾರ್ಯಕ್ರಮಗಳನ್ನು ಅಧಿಕಾರಿಗಳು ರೈತರಿಗೆ ಸಮರ್ಪಕವಾಗಿ ತಲುಪಿಸಬೇಕು. ರಸಗೊಬ್ಬರವನ್ನು ಕಡ್ಡಾಯವಾಗಿ ಪಾಯಿಂಟ್ ಆಫ್ ಸೇಲ್ ಯಂತ್ರದ ಮೂಲಕ ವಿತರಿಸಬೇಕೆಂದು ಸೂಚಿಸಿದರು.

೨೦೨೨-೨೩ ನೇ ಸಾಲಿನಲ್ಲಿ ಪ್ರಸ್ತುತ ಪೂರ್ವ ಮುಂಗಾರು ಹಂಗಾಮಿನಲ್ಲಿ ೫ ಲಕ್ಷ ೩೮ ಸಾವಿರ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದ್ದು, ಇಲಾಖೆ ಹೆಚ್ಚುವರಿಯಾಗಿ ೭ ಲಕ್ಷ ೫೬ ಸಾವಿರ ಕ್ವಿಂಟಾಲ್ ಬಿತ್ತನೆಬೀಜ ದಾಸ್ತಾನು ಮಾಡಿದೆ. ಈವರೆಗೆ ೪ ಸಾವಿರದ ೮೪ ಕ್ವಿಂಟಾಲ್ ಬಿತ್ತನಬೀಜವನ್ನು ರೈತರಿಗೆ ಪೂರೈಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top