ಬಳ್ಳಾರಿ,7 : ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಶನಿವಾರ ಮತ್ತು ಭಾನುವಾರ ಭೇಟಿ ನೀಡಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಬೆನ್ನಲ್ಲಿಯೇ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಆರಂಭಗೊಂಡಿದೆ. ಆಸ್ಪತ್ರೆಯ ಹೆರಿಗೆ ವಾರ್ಡ್ ಹತ್ತಿರ ಮತ್ತು ಓಲ್ಡ್ ಡೆಂಟಲ್ ಕಾಲೇಜ್ ಸುತ್ತ ಮುತ್ತ ಸ್ವಚ್ಛತೆ ಸೇರಿದಂತೆ ಆಸ್ಪತ್ರೆಯ ಎಲ್ಲೆಡೆ ಸ್ವಚ್ಛತಾ ಕಾರ್ಯ ಆರಂಭಗೊಂಡಿದೆ.