ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಬುಧವಾರ ರಾತ್ರಿ ಬೀಸಿದ ಭಾರಿ ಗಾಳಿ ಮತ್ತು ಸುರಿದ ಧಾರಾಕಾರ ಮಳೆಗೆ ಗ್ರಾಮದಲ್ಲಿ ಮರಗಳು,ವಿದ್ಯುತ್ ಕಂಬಗಳು ಬಿದ್ದಿರುವುದು ಮತ್ತು ಮನೆಗಳು ಜಖಂಗೊಂಡ ಸುದ್ದಿ ತಿಳಿದ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು ಮತ್ತು ಹಾನಿಯಾಗಿರುವುದನ್ನು ಪರಿಶೀಲಿಸಿದರು. ವಿದ್ಯುತ್ ಕಂಬಗಳನ್ನು ಕೂಡಲೇ ದುರಸ್ತಿ ಮಾಡಲು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಾಮಲೆಕ್ಕಿಗರಿಗೆ ಹಾನಿಪ್ರಮಾಣದ ವರದಿಗೆ ಸಂಬಂಧಿಸಿದಂತೆ ಕೆಲ ಸೂಚನೆಗಳನ್ನು ನೀಡಿದರು.
