ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ? ದಂಪತಿ ಬಗ್ಗೆ ಶಾಕಿಂಗ್​ ಸುದ್ದಿ

ಬೆಂಗಳೂರು: ಕನ್ನಡ ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇಂದೇ (ಜೂನ್ ೭) ಅವರು ‍ಡಿವೋರ್ಸ್  ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. 

೨೦೧೭ರಲ್ಲಿ ಪ್ರಸಾರವಾದ ‘ಬಿಗ್ ಬಾಸ್ ಕನ್ನಡ ಸೀಸನ್ ೫ಶೋನಲ್ಲಿ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಅವರು ಪರಸ್ಪರ ಪರಿಚಯ ಆಗಿದ್ದರು. ಅವರಿಬ್ಬರ ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಶೆಟ್ಟಿ ಅವರು ಪ್ರಪೋಸ್ ಮಾಡಿದ್ದರು. ಬಳಿಕ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿ ಅವರು ವಿನ್ನರ್ ಆದರೆ, ನಿವೇದಿತಾ ಗೌಡ ಅವರು ಮೂರನೇ ರನ್ನರ್ ಅಪ್ ಆಗಿದ್ದರು. ಆ ಶೋನಿಂದ ಇಬ್ಬರ ಖ್ಯಾತಿಯೂ ಹೆಚ್ಚಿತು. ಬಿಗ್ ಬಾಸ್ ಮುಗಿದ ಬಳಿಕ ನಿವೇದಿತಾ ಗೌಡ ಅವರು ಇನ್ನೂ ಕೆಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡರು. ಸೋಶಿಯಲ್ ಮೀಡಿಯಾದಲ್ಲಿ ಅವರು ಸಖತ್ ಫೇಮಸ್ ಆಗಿದ್ದಾರೆ. ಚಿತ್ರರಂಗದಲ್ಲಿ ಗಾಯಕನಾಗಿ, ಸಂಗೀತ ನರ‍್ದೇಶಕನಾಗಿ ಹಾಗೂ ನಟನಾಗಿ ಚಂದನ್ ಶೆಟ್ಟಿ ಬ್ಯುಸಿ ಆಗಿದ್ದಾರೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿರುವ ಸಾಧ್ಯತೆ ಇದೆ.

 

ಸೋಶಿಯಲ್ ಮೀಡಿಯಾದಲ್ಲಿ ನಿವೇದಿತಾ ಗೌಡ ತುಂಬ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಹೊಸ ಹೊಸ ರೀಲ್ಸ್ ಹಂಚಿಕೊಳ್ಳುತ್ತಾರೆ. ಅವರ ಪೋಸ್ಟ್ಗಳು ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗುತ್ತವೆ. ಅದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಾರೆ. ನಿವೇದಿತಾ ಗೌಡ ಅವರ ಪೋಸ್ಟ್ಗೆ ಒಂದಷ್ಟು ಜನರು ನೆಗೆಟಿವ್ ಕಮೆಂಟ್ ಮಾಡುತ್ತಾರೆ. ಆ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಂತಿಲ್ಲ. ಕಮೆಂಟ್ಗಳಲ್ಲಿ ಅನೇಕರು ಚಂದನ್ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಾರೆ. ಈ ಕಾರಣದಿಂದಲೂ ಸಂಸಾರದಲ್ಲಿ ಏನಾದರೂ ಕಿರಿಕ್ ಆಗಿರಬಹುದೇ ಎಂದು ಕೂಡ ಕೆಲವರು ಊಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top