‘ಡಿ ಕೆ ಶಿವಕುಮಾರ್ ದು ಕಾಂಗ್ರೆಸ್ ಪಕ್ಷಕ್ಕೆ ರಾಜಿಯಿಲ್ಲದ ನಿಷ್ಠೆ’

Kannada Nadu
‘ಡಿ ಕೆ ಶಿವಕುಮಾರ್ ದು ಕಾಂಗ್ರೆಸ್ ಪಕ್ಷಕ್ಕೆ ರಾಜಿಯಿಲ್ಲದ ನಿಷ್ಠೆ’

ಬೆಂಗಳೂರು : ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ರಾಜಕೀಯವಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನುವುದು ನಿತ್ಯದ ಸುದ್ದಿ. ಆದರೆ ಇದರ ನಡುವೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರೂ ಬಹಿರಂಗವಾಗಿ ಅನ್ಯೋನ್ಯವಾಗಿಯೇ ಇದ್ದಾರೆ.
ಇದೀಗ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಸಿದ್ದರಾಮಯ್ಯ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸುದೀರ್ಘ 6 ವರ್ಷಗಳನ್ನು ಡಿ.ಕೆ ಶಿವಕುಮಾರ್ ಅವರು ಪೂರೈಸಿದ್ದಾರೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವ ಕುಮಾರ್ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು. ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್‍ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ.
ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಪೂರ್ತಿದಾಯಕ ನಡವಳಿಕೆ ಆಗಿದೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ.
ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ. ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದ ನೆಟ್ಟಿಗರು:
ಇನ್ನು ಈ ಪೆÇೀಸ್ಟ್‍ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಅವರನ್ನು ಮೆಚ್ಚಿ ಮಾಡಿರುವ ಪೆÇೀಸ್ಟ್‍ಗೆ ಹಲವರು, ಹಾಗಾದರೆ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ಆಗ್ರಹಿಸಿದ್ದಾರೆ.
ಚಂದ್ರು ಎನ್ನುವವರು ಉಳಿದ ಅವಧಿಗೆ ಅವರನ್ನು ಮುಖ್ಯಮಂತ್ರಿ ಮಾಡಿ ಸರ್ ಎಂದಿದ್ದಾರೆ. Poತಿeಡಿeಜ ಃಥಿ ಈ ವ್ಯಾಖ್ಯಾನದ ಸಾರಾಂಶ ಇಷ್ಟೇ ಸದ್ಯಕ್ಕೆ ನಾನು ಮುಖ್ಯಮಂತ್ರಿ ಹುದ್ದೆಯನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡಲಾರೆ. 2028ರ ಚುನಾವಣೆಯವರೆಗೂ ಒಟ್ಟಾಗಿ ಹೋಗೋಣ 2028ಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಪಕ್ಷವನ್ನು ತರೋಣ ಅಂತಾ ಹೇಳ್ತಾ ಹೇಳ್ತಾನೆ ದಿನಗಳನ್ನು ಮುಂದೂಡವ ತಂತ್ರ ಎಂದೂ ಕೆಲವರು ವ್ಯಂಗ್ಯವಾಡಿದ್ದಾರೆ.

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";