ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಜುಲೈ 3ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆ ರಾಜಭವನದಲ್ಲಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳ ಬುಡಕಟ್ಟು ಜನಾಂಗದವರೊಂದಿಗೆ ರಾಷ್ಟ್ರಪತಿಗಳ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿರುವ ಕುರಿತು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಇಂದು ಬೆಂಗಳೂರು ನಗರದ ರೇಸ್ ಕೋರ್ಸ್ ರಸ್ತೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮುಖ್ಯ ಕಛೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಮಣಿವಣ್ಣನ್ ಹಾಗೂ ಇಲಾಖೆಯ ನಿರ್ದೇಶಕರಾದ ಪಿ. ಎಸ್ ಕಾಂತರಾಜು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪೂರ್ವ ತಯಾರಿ ಬಗ್ಗೆ ಸಭೆಯನ್ನು ನಡೆಸಿ ಮಾಹಿತಿ ಪಡೆದರು.
Facebook
Twitter
LinkedIn
WhatsApp
Email
Telegram