ಬೆಂಗಳೂರು: ಲೈಂಗಿಕ ದರ‍್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.
ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಂರ‍್ಭದಲ್ಲಿ ಎಚ್.ಡಿ.ರೇವಣ್ಣ ಅವರು ಮೂರು ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದರು. ಪೊಲೀಸ್ ವಾಹನದಿಂದ ಇಳಿದಿದ್ದ ರೇವಣ್ಣ, ನಿಂಬೆ ಹಣ್ಣುಗಳ ಸಮೇತ ನ್ಯಾಯಾಧೀಶರ ಮನೆಯತ್ತ ಹೆಜ್ಜೆ ಹಾಕಿದರು. ವಿಶೇಷ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದ್ದ ಸಂರ‍್ಭದಲ್ಲೂ ರೇವಣ್ಣ ನಿಂಬೆ ಹಣ್ಣು ಬಿಟ್ಟಿರಲಿಲ್ಲ.
ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದ್ದ ರೇವಣ್ಣ, ‘ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರು ಈ ರೀತಿ ಮಾಡಿದ್ದಾರೆ. ನನಗೆ ನ್ಯಾಯ ಕೊಡಿ’ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.
ನ್ಯಾಯಾಧೀಶರ ನಿವಾಸದಲ್ಲಿ ಎಚ್.ಡಿ. ರೇವಣ್ಣ ಪರ ವಕೀಲ ಮತ್ತು ಎಸ್ಐಟಿ ಅಧಿಕಾರಿಗಳ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ರೇವಣ್ಣರನ್ನು ಮೇ.೦೮ರವರೆಗೆ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದರ‍್ಜನ್ಯ ಆರೋಪ ರಾಷ್ಟ್ರಮಟ್ಟದಲ್ಲಿ ವ್ಯಾಪಕವಾಗಿ ರ‍್ಚೆಯಾಗುತ್ತಿದೆ. ಒಂದೆಡೆ ವಿದೇಶಕ್ಕೆ ಹಾರಿರುವ ಪ್ರಜ್ವಲ್ ಬಂಧಿಸಲು ಎಸ್ಐಟಿ ಅಧಿಕಾರಿಗಳು ಏರ್ಪರ‍್ಟ್ನಲ್ಲಿ ಕಾದು ಕುಳಿತಿದ್ದಾರೆ.